ಉಪ್ಪಿನಂಗಡಿ, ಆಗಸ್ಟ್ 24, 2023 (ಕರಾವಳಿ ಟೈಮ್ಸ್) : ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ನಿವಾಸಿ ಮುಸ್ತಫಾ ಎಂಬವರ ಪುತ್ರಿ ಫಾತಿಮತ್ ಶೌಹಾನ (17) ಎಂಬಾಕೆ ನಾಪತ್ತೆಯಾದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶೌಹಾನಾ ಮಂಗಳವಾರ ರಾತ್ರಿ ಎಂದಿನಂತೆ ರಾತ್ರಿ ಊಟ ಮುಗಿಸಿ ತನ್ನ ತಾಯಿಯ ಜೊತೆ ಮಲಗಿದ್ದವಳು ಮರುದಿನ ಬೆಳಿಗ್ಗೆ ನೋಡಿದಾಗ ಕಾಣದಿದ್ದು, ಅವಳು ಉಪಯೋಗಿಸುವ ಮೊಬೈಲ್ ಕೂಡಾ ಕಾಣೆಯಾಗಿರುತ್ತದೆ. ಮೊಬೈಲಿಗೆ ಕರೆ ಮಾಡಿದಾಗ ಸ್ವಿಚ್ ಆಪ್ ಆಗಿದ್ದು, ಪರಿಸರದಲ್ಲಿ ಹುಡುಕಾಡಿದರು ಪತ್ತೆಯಾಗಿರುವುದಿಲ್ಲ ಎಂದು ತಂದೆ ಮುಸ್ತಫಾ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 113/2023 ಕಲಂ 363 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment