ಉಪ್ಪಿನಂಗಡಿ, ಆಗಸ್ಟ್ 16, 2023 (ಕರಾವಳಿ ಟೈಮ್ಸ್) : ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಕೋಟೇಲು ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಪ್ರಕರಣ ಬೇಧಿಸಿ ಆರೋಪಿಗಳ ಸಹಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ಮಂಗಳವಾರ ಅಪರಾಹ್ನ ನಡೆದಿದೆ.
ಸೋಮವಾರ ಮಧ್ಯಾಹ್ನ ಉಪ್ಪಿನಂಗಡಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕಾರ್ಫಿಯೋ ವಾಹನವನ್ನು ಪೊಲೀಸರು ನಿಲ್ಲಿಸಲು ಸೂಚಿಸಿದ್ದಾರೆ. ಆದರೆ ವಾಹನ ನಿಲ್ಲಿಸಿ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಲು ಯತ್ನಿಸಿದ್ದು, ಅವರನ್ನು ಹಿಡಿದ ಪೊಲೀಸರು ವಿಚಾರಣೆ ನಡೆಸಿದ ವೇಳೆ ಮಾದಕ ವಸ್ತು ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳನ್ನು ಪುತ್ತೂರು ತಾಲೂಕು, ಬಜತ್ತೂರು ಗ್ರಾಮದ ನಿವಾಸಿ ಲತೀಫ್ ಬಿ ಎ (35) ಹಾಗೂ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ನಿವಾಸಿ ಬಿ ಜುನೈದ್ (30) ಎಂದು ಹೆಸರಿಸಲಾಗಿದೆ. ಆರೋಪಿಗಳ ವಾಹನದಲ್ಲಿ ಅಂದಾಜು 6 ಸಾವಿರ ರೂಪಾಯಿ ಮೌಲ್ಯದ 3.2 ಮಿಲಿ ಗ್ರಾಂ ಮಾದಕ ವಸ್ತು ಎಂಡಿಎಂಎ ಪತ್ತೆಯಾಗಿದೆ. ಮಾದಕ ವಸ್ತು, ಆರೋಪಿಗಳ ಸಹಿತ ಅವರ ಬಳಿಯಿದ್ದ 2 ಮೊಬೈಲ್, ಸಾಗಾಟಕ್ಕೆ ಬಳಸಿದ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 108/2023 ಕಲಂ 8(ಸಿ) 22(ಬಿ) ಎನ್ ಡಿ ಪಿ ಎಸ್ ಆಕ್ಟ್ ಆರ್/ಡಬ್ಲ್ಯು 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment