ಬಂಟ್ವಾಳ, ಆಗಸ್ಟ್ 15, 2023 (ಕರಾವಳಿ ಟೈಮ್ಸ್) : ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಾಮದಪದವು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಧ್ವಜಾರೋಹಣ ಮಂಗಳವಾರ ನಡೆಯಿತು.
ಸ್ಥಳದಾನಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ವಿಶೇಷ ಆಹ್ವಾನಿತ ಖಾಯಂ ಸದಸ್ಯ ಅಜೇಯ ಕುಮಾರ್ ಕೊಂಬರಬೈಲು ಧ್ವಜಾರೋಹಣಗೈದು ಗೌರವ ವಂದನೆ ಸ್ವೀಕರಿಸಿದರು. ಉಪನ್ಯಾಸಕ ರಾಧೇಶ ತೋಳ್ಪಾಡಿ ಎಸ್ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಅಭಿವೃದ್ಧಿ ಸಮಿತಿಯ ಸದಸ್ಯರಾದ ನಾಗರಾಜ ಶೆಟ್ಟಿ, ಹಂಝ ಬಸ್ತಿಕೋಡಿ, ಪ್ರಭಾಕರ ಶೆಟ್ಟಿ, ರಮೇಶ್ ಶೆಟ್ಟಿ, ಗೋಪಾಲಕೃಷ್ಣ ಚೌಟ, ಸಂಸ್ಥೆಯ ಪ್ರಾಂಶುಪಾಲ ಶ್ರೀಧರ್ ಎಚ್ ಜಿ, ಉಪಪ್ರಾಂಶುಪಾಲೆ ಶ್ರೀಮತಿ ವಿದ್ಯಾ ಕುಮಾರಿ ಮೊದಲಾದವರು ಭಾಗವಹಿಸಿದ್ದರು.
ಕಾಲೇಜು ವಿಭಾಗದಲ್ಲಿ ನಡೆದ “ಆಟಿಡೊಂಜಿ ದಿನ” ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವ ಪ್ರಯುಕ್ತ ನಡೆಸಲಾದ ಚಿತ್ರ ಕಲಾ ಸ್ಪರ್ಧಾ ವಿಜೇತರಿಗೆ ಇದೇ ವೇಳೆ ಬಹುಮಾನ ವಿತರಿಸಲಾಯಿತು.
0 comments:
Post a Comment