ಬಂಟ್ವಾಳ, ಆಗಸ್ಟ್ 10, 2023 (ಕರಾವಳಿ ಟೈಮ್ಸ್) : ತಾಲೂಕಿನ ನೆಟ್ಲಮುಡ್ನೂರು ಗ್ರಮದ ಗಣೇಶನಗರ ಎಂಬಲ್ಲಿ ಸಾರ್ವಜನಿಕವಾಗಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು ಆರೋಪಿ ಮುಡ್ನೂರು ಗ್ರಾಮದ ನಿವಾಸಿ ಶಶಿಧರ ಶೆಟ್ಟಿ ಎಂಬಾತನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಯ ವಶದಲ್ಲಿದ್ದ ಕೈಚೀಲವನ್ನು ಪೊಲೀಸರು ಪರಿಶೀಲನೆ ನಡೆಸಿದ ವೇಳೆ ವಿವಿಧ ಕಂಪೆನಿಗಳಿಗೆ ಸೇರಿದ ಒಟ್ಟು 2.880 ಲೀಟರ್ ಅಕ್ರಮ ಮದ್ಯದ ಸ್ಯಾಚೆಟ್‍ಗಳು ಹಾಗೂ ಮದ್ಯ ಮಾರಾಟ ಮಾಡಿ ಬಂದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅನಂತಾಡಿ ಗ್ರಾಮದ ಗೋಳಿಕಟ್ಟೆಯ ಮದಿರಾ ವೈನ್ ಶಾಪಿನಿಂದ ಆರೋಪಿ ಮದ್ಯ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಬಗ್ಗೆ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment