ಬಂಟ್ವಾಳ, ಆಗಸ್ಟ್ 17, 2023 (ಕರಾವಳಿ ಟೈಮ್ಸ್) : ಜಾನುವಾರು ಸಾಗಾಟಗಾರರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿ ನೈತಿಕ ಗೂಂಡಾಗಿರಿ ಮೆರೆದ ಘಟನೆ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಬುಧವಾರ (ಆ 16) ಮುಂಜಾನೆ ನೆಡದಿದೆ.
ಪಾತೂರು ಗ್ರಾಮದ ಮಂಜೇಶ್ವರ ನಿವಾಸಿ ಮೂಸಾ (55) ಅವರು ಈ ಬಗ್ಗೆ ವಿಟ್ಲ ಪೊಲೀಸರಿಗೆ ದುರು ನೀಡಿದ್ದು, ಆಗಸ್ಟ್ 15 ರಂದು ಇಬ್ರಾಹಿಂ ಯಾನೆ ಮೋನು, ಹಮೀದ್ ಯಾನೆ ಜಲಾಲ್ ಮತ್ತು ಸಾಲೆತ್ತೂರಿನ ಹಮೀದ್ ಎಂಬವರು ಗೂಡ್ಸ್ ವಾಹನದಲ್ಲಿ ನಾಲ್ಕು ಜನರು ತೆರಳಿ ಮುಳಿಯ ಎಂಬಲ್ಲಿಂದ 5 ಜಾನುವಾರುಗಳನ್ನು ಖರೀದಿ ಮಾಡಿಕೊಂಡು ಕಜೆ ಎಂಬಲ್ಲಿಗೆ ಸಾಗಾಟ ಮಾಡುತ್ತಿರುವಾಗ ಆ 16 ರಂದು ಮುಂಜಾನೆ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿಗೆ ತಲುಪಿದಾಗ ಆರೋಪಿಗಳಾದ ಜಯ ಪ್ರಶಾಂತ, ಲಕ್ಷೀಶ ಹಾಗೂ ಇತರರು ಮೂರು ಮೋಟಾರು ಸೈಕಲ್ ಮತ್ತು ಒಂದು ಕಾರನ್ನು ರಸ್ತೆಗೆ ಅಡ್ಡವಾಗಿಟ್ಟು ಅಕ್ರಮ ಕೂಟ ಸೇರಿಕೊಂಡು ಗೂಡ್ಸ್ ವಾಹನದಲ್ಲಿದ್ದ ನಾಲ್ಕು ಜನರನ್ನು ಎಳೆದು ಹಾಕಿ ಬೇಸ್ಬಾಲ್ ಬ್ಯಾಟ್ ಹಾಗೂ ಕತ್ತಿಯಿಂದ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 143/2023 ಕಲಂ 341, 307, 324, 323, 506, 143, 147, 148 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈ ಮಧ್ಯೆ ಜಾನುವಾರು ಸಾಗಾಟಗಾರರ ಮೇಲೂ ಅಕ್ರಮ ಸಾಗಾಟ ಹಿನ್ನಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿಗಳಾದ ಮಂಜೇಶ್ವರ ಬಾಕ್ರಬೈಲು ನಿವಾಸಿ ಇಬ್ರಾಹಿಂ ಯಾನೆ ಮೋನು, ಮಂಜೇಶ್ವರ ಬಾಕ್ರಬೈಲು ನಿವಾಸಿ ಮೂಸಾ, ಬಂಟ್ವಾಳದ ಕನ್ಯಾನ ಗ್ರಾಮದ ನಿವಾಸಿ ಹಮೀದ್ ಯಾನೆ ಜಲಾಲ್ ಹಾಗೂ ಸಾಲೆತ್ತೂರಿನ ಹಮೀದ್ ಎಂಬವರನ್ನು ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 5 ಜಾನುವಾರುಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನ ಸಹಿತವಾಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆಯೂ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 142/2023, ಕಲಂ 5, 6, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ-2020 ಹಾಗೂ 11(1)(ಎ),11(1)(ಡಿ) ಪ್ರಾಣಿ ಹಿಂಸೆ ನಿಷೇಧ ಕಾಯ್ದೆ 1960 ರಂತೆ ಪ್ರಕರಣ ದಾಖಲಾಗಿದೆ.
0 comments:
Post a Comment