ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕಠಿಣ ಕ್ರಮ ಎದುರಿಸಬೇಕಾಗುತ್ತದೆ
ಮಂಗಳೂರು, ಆಗಸ್ಟ್ 01, 2023 (ಕರಾವಳಿ ಟೈಮ್ಸ್) : ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದು ಎಫ್.ಐ.ಆರ್ ರಿಜಿಸ್ಟರ್ ಆಗಿದೆ. ತನಿಖೆಯನ್ನು ಡಿ.ವೈ.ಎಸ್.ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದಾರೆ. ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಮಂಗಳವಾರ ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಯಾರೊಬ್ಬರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಿದ್ದೇನೆ. ನಾಡಿನ ಜನರಿಗೆ ಸುರಕ್ಷಿತ, ನೆಮ್ಮದಿಯ ವಾತಾವರಣ ಕಲ್ಪಿಸುವುದು ನಮ್ಮ ಕರ್ತವ್ಯ. ಇದಕ್ಕೆ ಅಡ್ಡಿಪಡಿಸುವವರು ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಸಾಮಾಜಿಕ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ಚರ್ಚಿಸಿ ತೀರ್ಮಾನ ಮಾಡುತ್ತೇವೆ. ನ್ಯಾಯಾಲಯದ ತೀರ್ಪನ್ನು ಅರ್ಥೆÊಸಿಕೊಂಡು ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದ ಸಿಎಂ ಸಿದ್ದರಾಮಯ್ಯ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸರಕಾರದ ವಿರುದ್ಧ ಅಥವಾ ಯಾವುದೇ ವ್ಯಕ್ತಿಯ ವಿರುದ್ಧ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಚನಾತ್ಮಕ ಟೀಕೆ, ಟಿಪ್ಪಣಿಗಳಿಗೆ ನಾವು ಮುಕ್ತರಿದ್ದೇವೆ, ಆದರೆ ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ದುರುಪಯೋಗ ಪಡಿಸಿಕೊಂಡು ಒಬ್ಬ ವ್ಯಕ್ತಿಯ ಅಥವಾ ಆತನ ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಇಂತದ್ದನ್ನು ಸಹಿಸುವುದಿಲ್ಲ ಎಂದು ಖಡಕ್ ಆಗಿ ಎಚ್ಚರಿಸಿದರು.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವೆ ಲಕ್ಷಿö್ಮÃ ಹೆಬ್ಬಾಳ್ಕರ್, ಮಾಜಿ ಸಚಿವರಾದ ಬಿ ರಮಾನಾಥ ರೈ, ವಿನಯಕುಮಾರ್ ಸೊರಕೆ, ಶಾಸಕರಾದ ಡಾ ಮಂಜುನಾಥ ಭಂಡಾರಿ, ಕೆ ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿ’ಸೋಜ ಮೊದಲಾದ ಜೊತೆಗಿದ್ದರು.
0 comments:
Post a Comment