ಮಹಿಳೆ ಸ್ನಾನ ಮಾಡುತ್ತಿದ್ದ ವೇಳೆ ಬಚ್ಚಲು ಮನೆಗೆ ನುಗ್ಗಿ ಅನುಚಿತ ವರ್ತನೆ : ಆರೋಪಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಮಹಿಳೆ ಸ್ನಾನ ಮಾಡುತ್ತಿದ್ದ ವೇಳೆ ಬಚ್ಚಲು ಮನೆಗೆ ನುಗ್ಗಿ ಅನುಚಿತ ವರ್ತನೆ : ಆರೋಪಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

22 August 2023

ಮಹಿಳೆ ಸ್ನಾನ ಮಾಡುತ್ತಿದ್ದ ವೇಳೆ ಬಚ್ಚಲು ಮನೆಗೆ ನುಗ್ಗಿ ಅನುಚಿತ ವರ್ತನೆ : ಆರೋಪಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ, ಆಗಸ್ಟ್ 22, 2023 (ಕರಾವಳಿ ಟೈಮ್ಸ್) : ಮಹಿಳೆ ತಮ್ಮ ಮನೆಯ ಬಚ್ಚಲು ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಅಕ್ರಮ ಪ್ರವೇಶ ಮಾಡಿದ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಧರ್ಮಸ್ಥಳ ಪೆÇಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಶೋಭಾ ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಆ 20 ರಂದು ಭಾನುವಾರ ರಾತ್ರಿ ಸಮಯ ತಾನು ತನ್ನ ಮನೆಯಲ್ಲಿ ಸ್ನಾನ ಮಾಡುವ ಸಲುವಾಗಿ ಬಚ್ಚಲು ಮನೆಗೆ ಹೋದಾಗ ನೆರೆಕೆರೆ ನಿವಾಸಿ ಮನೋಜ್ ಓ ಆರ್ ಎಂಬಾತ ಬಚ್ಚಲು ಮನೆಗೆ ಅಕ್ರಮ ಪ್ರವೇಶ ಮಾಡಿ ಅನುಚಿತವಾಗಿ ವರ್ತಿಸಿದ್ದಾನೆ. ಈ ವೇಳೆ ನಾನು ಬೊಬ್ಬೆ ಹೊಡೆದಾಗ ಆರೋಪಿ ಅಲ್ಲಿಂದ ಓಡಿ ಹೋಗಿರುತ್ತಾನೆ ಎಂದು ನೀಡಿರುವ ದೂರಿನ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 448, 354, 509 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮಹಿಳೆ ಸ್ನಾನ ಮಾಡುತ್ತಿದ್ದ ವೇಳೆ ಬಚ್ಚಲು ಮನೆಗೆ ನುಗ್ಗಿ ಅನುಚಿತ ವರ್ತನೆ : ಆರೋಪಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top