ಬಂಟ್ವಾಳ, ಸೆಪ್ಟೆಂಬರ್ 05, 2023 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ (ರಿ) ಇದರ ವತಿಯಿಂದ ಮಾದಕ ವಸ್ತುಗಳ ಬಳಕೆ ವಿರುದ್ದ ಕಾರ್ಯಾಗಾರ ಸೆ 8 ರಂದು ಶುಕ್ರವಾರ ಅಪರಾಹ್ನ 3.30ಕ್ಕೆ ಪಾಣೆಮಂಗಳೂರು ಸಾಗರ್ ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಲಿದೆ.
ದ ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಕಾರ್ಯಾಗಾರ ಉದ್ಘಾಟಿಸಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಅಧ್ಯಕ್ಷತೆ ವಹಿಸಲಿದ್ದು, ಪ್ರೇರಣಾ ಭಾಷಣಗಾರ ಹಾಗೂ ಆಪ್ತ ಸಮಾಲೋಚಕ ರಫೀಕ್ ಮಾಸ್ಟರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ಸಂಯುಕ್ತ ಜಮಾಅತ್ ಪ್ರಕಟಣೆ ತಿಳಿಸಿದೆ.
0 comments:
Post a Comment