ಬೆಂಗಳೂರು, ಸೆಪ್ಟೆಂಬರ್ 04, 2023 (ಕರಾವಳಿ ಟೈಮ್ಸ್) : ರಾಜ್ಯ ಸರಕಾರದ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮ ನಿಯಮಿತ ಇದರ ವತಿಯಿಂದ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳ ಅರಿವು ಶೈಕ್ಷಣಿಕ ಸಾಲ ಯೋಜನೆಯ ನವೀಕರಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ಡಿ.ಸಿಇಟಿ, ಪಿಜಿ ಸಿಇಟಿ, ನೀಟ್ ಮೂಲಕ ಪದವಿ ಹಾಗೂ ಸ್ನಾತಕೋತ್ತರ ಕೋರ್ಸುಗಳಾದ ವೈದ್ಯಕೀಯ (ಎಂಬಿಬಿಎಸ್, ಎಂಡಿ, ಎಂಎಸ್), ದಂತ ವೈದ್ಯಕೀಯ (ಬಿಡಿಎಸ್, ಎಂಡಿಎಸ್), ಆಯುಷ್ (ಬಿ.ಆಯುಷ್, ಎಂ. ಆಯುಷ್), ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ (ಬಿ.ಇ., ಬಿ.ಟೆಕ್, ಎಂ.ಇ, ಎಂ.ಟೆಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ (ಬಿ.ಆರ್ಕ್, ಎಂ.ಆರ್ಕ್) ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸುವ ಮುಂಚೆ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ 12 ರಷ್ಟನ್ನು ಪಾವತಿಸಬೇಕಾಗಿದೆ. ಶೇ 12 ರಷ್ಟು ಮೊತ್ತವನ್ನು ಆನ್ ಲೈನ್ ಮುಖಾಂತರ ಪಾವತಿಸಬಹುದು.
ಅಲ್ಲದೆ ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅಂತಹ ವಿದ್ಯಾರ್ಥಿಗಳು ರಿನೀವನ್ ಮೊತ್ತ ಪಾವತಿಸುವ ಅಗತ್ಯವಿರುವುದಿಲ್ಲ.
ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಕೆಎಂಡಿಸಿ ವೆಬ್ ಸೈಟ್ http://kmdconline.karnataka.gov.in ಮುಖಾಂತರ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ಪ್ರಕಟಣೆ ತಿಳಿಸಿದೆ.
0 comments:
Post a Comment