ಬೆಳ್ತಂಗಡಿ, ಸೆಪ್ಟೆಂಬರ್ 02, 2023 (ಕರಾವಳಿ ಟೈಮ್ಸ್) : ತಾಲೂಕಿನ ನಿಟ್ಟಡೆ ಗ್ರಾಮದ ಕುಂಭಶ್ರೀ ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಶುಕ್ರವಾರ (ಸೆ 1) ಬೆಳಿಗ್ಗೆ ಗಾಂಜಾ ಸೇವಿಸಿ ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿದ್ದ ಚಿಕ್ಕಮಗಳೂರು ಮೂಲದ ವ್ಯಕ್ತಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಿಕ್ಕಮಗಳೂರು ಜಿಲ್ಲೆ, ದೋನಿಗದ್ದೆ ನಿವಾಸಿ ಸಂತೋಷ್ (23) ಎಂದು ಹೆಸರಿಸಲಾಗಿದೆ.
ವೇಣೂರು ಪೊಲೀಸರು ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಕುಂಭ್ರಶೀ ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ 05 ಎಂಎಫ್-3460 ನೊಂದಣಿ ಸಂಖ್ಯೆಯ ಕಾರನ್ನು ಅದರ ಚಾಲಕ ಸಂತೋಷ್ ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದಾಗ, ಪೊಲೀಸರು ತಡೆದು ನಿಲ್ಲಿಸಿದಾಗ ಆತನು ಅಮಲಿನ ನಶೆಯಲ್ಲಿದ್ದಂತೆ ಕಂಡು ಬಂದ ಹಿನ್ನಲೆಯಲ್ಲಿ ಆತನನ್ನು ವಿಚಾರಣೆಗೊಳಪಡಿಸಿದ್ದಾರೆ.
ಪೊಲೀಸರ ವಿಚಾರಣೆ ವೇಳೆ ಆತ ಗಾಂಜಾ ಸೇವನೆ ಮಾಡಿರುವ ಬಗ್ಗೆ ಒಪ್ಪಿಕೊಂಡ ಹಿನ್ನಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವೈಧ್ಯಾಧಿಕಾರಿಗಳಿಂದ ತಪಾಸಣೆಗೆ ಒಳಪಡಿಸಿದಾಗ ನಿಷೇದಿತ ವಸ್ತು ಗಾಂಜಾ ಸೇವಿಸಿರುವುದು ದೃಢಪಟ್ಟಿರುತ್ತದೆ. ಆರೋಪಿ ವಿರುದ್ದ ವೇಣೂರು ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 54/2023 ಕಲಂ : 27(ಬಿ) ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
0 comments:
Post a Comment