ಬೆಳ್ತಂಗಡಿ, ಸೆಪ್ಟೆಂಬರ್ 16, 2023 (ಕರಾವಳಿ ಟೈಮ್ಸ್) : ತಾಲೂಕಿನ ಉರುವಾಲು ಗ್ರಾಮದ ನಿವಾಸಿ ಸಂದೇಶ್ ಎಂಬಾತ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ, ಸರಕಾರಕ್ಕೆ ಯಾವುದೇ ರಾಜಸ್ವ ಪಾವತಿಸದೇ ಅಕ್ರಮವಾಗಿ ಮರಳು ಕಳವು ಮಾಡಿ ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರಿನ ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಭೂ ವಿಜ್ಞಾನಿ ಲಾಯಲ್ ಗ್ಲಾಡ್ಸನ್ಸ್ ಮಿರಾಂಡ ನೇತೃತ್ವದ ಅಧಿಕಾರಿಗಳ ತಂಡ 48 ಟನ್ ಮರಳನ್ನು ವಶಪಡಿಸಿಕೊಂಡ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಬೆಳ್ತಂಗಡಿ ಕಂದಾಯ ನಿರೀಕ್ಷಕರ ಜೊತೆ ಸೇರಿ ಗಣಿ ಮತ್ತು ಭೂವಿಜ್ಞಾನ ಇಲಾಖಾಧಿಕಾರಿಗಳು ಈ ದಾಳಿ ಸಂಘಟಿಸಿದ್ದು, ದಾಳಿ ವೇಳೆ ಸುಮಾರು 33,600/ ರೂಪಾಯಿ ಮೌಲ್ಯದ ಸುಮಾರು 48 ಟನ್ ಮರಳು ದಾಸ್ತಾನು ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 66/2023 ಕಲಂ 379 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
0 comments:
Post a Comment