ಬೆಳ್ತಂಗಡಿ, ಸೆಪ್ಟೆಂಬರ್ 13, 2023 (ಕರಾವಳಿ ಟೈಮ್ಸ್) : ತಾಲೂಕು ಪಶು ವೈದ್ಯ ಅಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ ಟಿ ಸಿ ಮಂಜನಾಯ್ಕ ಅವರು ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಬೈಕ್ ಕಳವುಗೈದ ಘಟನೆ ಮಂಗಳವಾರ ನಡೆದಿದೆ.
ಡಾ ಮಂಜನಾಯ್ಕ ಅವರು ಮಂಗಳವಾರ ಬೆಳಿಗ್ಗೆ ಎಂದಿನಂತೆ ಬಂದು ಆಸ್ಪತ್ರೆಯ ಶೆಡ್ಡಿನಲ್ಲಿ ತನ್ನ ಬೈಕ್ ನಿಲ್ಲಿಸಿದ್ದು, ರಾತ್ರಿ ನೋಡಿದಾಗ ಶೆಡ್ಡಿನಲ್ಲಿದ್ದ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳವಾಗಿರುವ ಬೈಕಿನ ಅಂದಾಜು ಮೌಲ್ಯ 35 ಸಾವಿರ ರೂಪಾಯಿ ರೂಪಾಯಿ ಎಂದು ಅಂದಾಜಿಸಲಾಗಿದ್ದು, ಈ ಬಗ್ಗೆ ಡಾ ಟಿ ಸಿ ಮಂಜನಾಯ್ಕ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 85/2023 ಕಲಂ 379 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment