ಬೆಳ್ತಂಗಡಿ, ಸೆಪ್ಟೆಂಬರ್ 17, 2023 (ಕರಾವಳಿ ಟೈಮ್ಸ್) : ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು-ವಲಸರಿ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಶನಿವಾರ ಸಂಜೆ ದಾಳಿ ನಡೆಸಿದ ಧರ್ಮಸ್ಥಳ ಠಾಣಾ ಪೊಲೀಸರು ಕೋಳಿ ಅಂಕಕ್ಕೆ ಬಳಸಿದ ಸೊತ್ತುಗಳ ಸಹಿತ 8 ಮಂದಿ ಅರೋಪಗಳನ್ನು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಸತೀಶ, ಜಿತೇಂದ್ರ, ಶೀನ ಮುಗೇರ, ಅಣ್ಣು, ಶ್ರೀಧರ, ಮನೋಜ ಕುಮಾರ್, ಸತೀಶ್, ಸುಧಾಕರ ಎಂದು ಹೆಸರಿಸಲಾಗಿದೆ. ಬಂಧಿತರಿಂದ 2350/- ರೂಪಾಯಿ ನಗದು, 4 ಹುಂಜ ಕೋಳಿಗಳು, 2 ಕೋಳಿ ಬಾಲುಗಳು, ಒಂದು ಓಮಿನಿ ಕಾರು, ಎರಡು ದ್ವಿ ಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 68/2023 ಕಲಂ 87 ಕರ್ನಾಟಕ ಪೆÇಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment