ಬೆಳ್ತಂಗಡಿ, ಸೆಪ್ಟೆಂಬರ್ 28, 2023 (ಕರಾವಳಿ ಟೈಮ್ಸ್) : ತಾಲೂಕಿನ ಉಜಿರೆ ಪರಿಸರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಠಾಣಾ ಪೊಲೀಸರು ಆರೋಪಿ ಉಮೇಶ ಅಲಿಯಾಸ್ ಉಮೇಶ ಬಳೆಗಾರ ಎಂಬಾತನನ್ನು ಮೈಸೂರು ಜಿಲ್ಲೆಯಿಂದ ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ. ಆರೋಪಿ ಕಳವು ಮಾಡಿ ಮಾರಾಟ ಮಾಡಿದ್ದ ಅಂದಾಜು 4,68,800/- ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
28 September 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment