ಬಂಟ್ವಾಳದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಬಂಟ್ವಾಳ. ಸೆಪ್ಟೆಂಬರ್ 15, 2023 (ಕರಾವಳಿ ಟೈಮ್ಸ್) : ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾದ ಡಾ ಬಿ ಆರ್ ಅಂಬೇಡ್ಕರ್ ಅವರ ಸುಮಾರು ಎರಡು ವರ್ಷ ಮೂರು ತಿಂಗಳುಗಳ ನಿರಂತರ ಅಧ್ಯಯನದಿಂದ ಮೂಡಿ ಬಂದ ನಮ್ಮ ಭಾರತದ ಸಂವಿಧಾನ ನಮ್ಮ ಪ್ರಜಾಪ್ರಭುತ್ವ ರಾಷ್ಟ್ರದ ಅಮೂಲ್ಯ ಆಸ್ತಿ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಇಂದು ನಮಗೆ ನಾವೇ ಅರ್ಪಿಸಿಕೊಂಡ ಸಂವಿಧಾನವನ್ನು ಅದರ ಹಿರಿಮೆಯನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಬಂಟ್ವಾಳ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಎಸ್ ಬಿ ಕೂಡಲಗಿ ಹೇಳಿದರು.
ಶುಕ್ರವಾರ ಬಿ ಸಿ ರೋಡಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಾರಂಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಅಶೋಕ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿಂದಿಯಾ, ಪಶು ವೈದ್ಯಾಧಿಕಾರಿ ಅವಿನಾಶ್ ಭಟ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ತಾರಾನಾಥ ಸಾಲಿಯಾನ್, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ದಿನೇಶ್, ತಾಲೂಕು ಪಂಚಾಯತ್ ವ್ಯವಸ್ಥಾಪಕಿ ಶಾಂಭವಿ, ಕೇಂದ್ರ ಸ್ಥಾನೀಯ ಉಪತಹಸೀಲ್ದಾರ್ ನರೇಂದ್ರ ನಾಥ್ ಮಿತ್ತೂರು, ಉಪ ತಹಶೀಲ್ದಾರ್ ಗಳಾದ ರಾಜೇಶ್ ನಾಯ್ಕ್, ದಿವಾಕರ ಮುಗುಳಿಯ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ, ಚುನಾವಣೆ ಶಾಖೆಯ ಉಪತಹಸೀಲ್ದಾರ್ ನವೀನ್ ಬೆಂಜನಪದವು ಮೊದಲಾದವರು ಭಾಗವಹಿಸಿದ್ದರು.
0 comments:
Post a Comment