ಬೆಳ್ತಂಗಡಿ, ಸೆಪ್ಟೆಂಬರ್ 28, 2023 (ಕರಾವಳಿ ಟೈಮ್ಸ್) : ತಾಲೂಕಿನ ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯಲ್ಲಿ ಗುರುವಾರ ಮಧ್ಯಾಹ್ನ ಗಾಂಜಾ ಸೇವಿಸಿದ್ದ ವ್ಯಕ್ತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು, ಚಿಬಿದ್ರೆ ಗ್ರಾಮದ ನಿವಾಸಿ ಮೊಹಮ್ಮದ್ ಮುಸ್ತಾಫಾ (25) ಎಂದು ಹೆಸರಿಸಲಾಗಿದೆ. ಬಂಧಿತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಆತ ನಿಷೇದಿತ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಆತನ ವಿರುದ್ದ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 72/2023 ಕಲಂ 27(ಬಿ) ಎನ್ ಡಿ ಪಿ ಎಸ್ ಕಾಯಿದೆಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment