ಬಂಟ್ವಾಳ, ಸೆಪ್ಟೆಂಬರ್ 27, 2023 (ಕರಾವಳಿ ಟೈಮ್ಸ್) : ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿರುವ ಬೆಂಗಳೂರು ಮೂಲದ ವಿದ್ಯಾರ್ಥಿ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ವಿದ್ಯಾರ್ಥಿಯ ತಾಯಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೆಕಲ್ಲು ತಾಲೂಕು ನಿವಾಸಿ ಶ್ರೀಮತಿ ಭಾಗ್ಯ ಅವರು ಠಾಣೆಗೆ ದೂರು ನೀಡಿದ್ದು, ತನ್ನ ಕಿರಿಯ ಮಗ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಶಾಲಾ ಹಾಸ್ಟೆಲಿನಲ್ಲಿ ವಾಸ್ತವ್ಯವಿರುವುದಾಗಿರುತ್ತದೆ.
ಸೆ 19 ರಂದು ಊರಿಗೆ ಬಂದಿದ್ದ ಈತ ಸೆ 23 ರಂದು ರಾತ್ರಿ ಹಿಂತಿರುಗಿ ಹಾಸ್ಟೆಲಿಗೆ ಹೋಗುವುದಾಗಿ ಹೇಳಿ ರೈಲಿನ ಮೂಲಕ ಬೆಂಗಳೂರಿನಿಂದ ತೆರಳಿರುತ್ತಾನೆ. ಮರುದಿನ ಬೆಳಿಗ್ಗೆ ಮಗನ ಮೊಬೈಲ್ ಕರೆ ಸಂಪರ್ಕಿಸಲು ತಾಯಿಗೆ ಸಾಧ್ಯವಾಗದ ಹಿನ್ನಲೆಯಲ್ಲಿ ಆತನ ಸ್ನೇಹತನಿಗೆ ಕರೆ ಮಾಡಿದ್ದು, ಬಾಲಕ ಹಾಸ್ಟೆಲಿಗೆ ತಲುಪದ ಬಗ್ಗೆ ತಿಳಿದು ಬಂದಿತ್ತು. ಬಳಿಕ ತಾಯಿ ಶಾಲಾಡಳಿತ ಮಂಡಳಿಗೆ ಮಾಹಿತಿ ನೀಡಿ, ಹುಡುಕಾಟ ನಡೆಸಿದರೂ ಬಾಲಕ ಪತ್ತೆಯಾಗದ ಹಿನ್ನಲೆಯಲ್ಲಿ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಠಾಣೆಯಲ್ಲಿ ಅಪರಾಧ ಕ್ರಮಾಂಕ 105/2023 ಕಲಂ 363 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
0 comments:
Post a Comment