ಬಂಟ್ವಾಳ, ಸೆಪ್ಟೆಂಬರ್ 24, 2023 (ಕರಾವಳಿ ಟೈಮ್ಸ್) : ಕಾವಳಪಡೂರು ಗ್ರಾಮದ ಕಾಡಬೆಟ್ಟು ಕ್ರಾಸ್ ಬಳಿ ಕಾರು ಡಿಕ್ಕಿ ಹೊಡೆದು ಅಟೋ ರಿಕ್ಷಾ ಚಾಲಕ ವಿನಾಯಕ ಅವರು ಮೃತಪಟ್ಟು, ಕಾರು ಚಾಲಕ ಸಹಿತ ಇಬ್ಬರು ಗಾಯಗೊಂಡ ಟ್ಟ ಘಟನೆ ಶನಿವಾರ ನಡೆದಿದೆ.
ಶನಿವಾರ ಬೆಳಿಗ್ಗೆ ಕಾಡಬೆಟ್ಟು ಕ್ರಾಸ್ ಬಳಿ ದಿನೇಶ್ ಎಂಬವರು ಚಲಾಯಿಸುತ್ತಿದ್ದ ಕಾರು ಚಾಲಕನ ನಿರ್ಲಕ್ಷ್ಯತನದಿಂದ ಅಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಡಾಮಾರು ರಸ್ತೆಗೆ ಮಗುಚಿ ಬಿದ್ದು ಆಟೋ ಚಾಲಕ ವಿನಾಯಕ ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಅಂಬುಲೆನ್ಸ್ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ.
ಅಪಘಾತದಿಂದ ಕಾರು ಚಾಲಕ ದಿನೇಶ್ ಹಾಗೂ ಪ್ರಯಾಣಿಕ ಬಾಬು ಮೂಲ್ಯ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment