ಬಂಟ್ವಾಳ, ಸೆಪ್ಟೆಂಬರ್ 22, 2023 (ಕರಾವಳಿ ಟೈಮ್ಸ್) : ತಾಲೂಕಿನ ಬಿ ಸಿ ರೋಡು ಸಮೀಪದ ಕೈಕಂಬ ಜಂಕ್ಷನ್ ಬಳಿ ನಡೆಯುತ್ತಿದ್ದ ಅಕ್ರಮ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಸೊತ್ತುಗಳ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಚಂದ್ರಹಾಸ ಹಾಗೂ ಪುರುಷೋತ್ತಮ ಎಂದು ಹೆಸರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಪೊಲೀಸರು ಆರೋಪಿಗಳ ಸಹಿತ ಮಟ್ಕಾ ಚೀಟಿ ಬರೆಯುತ್ತಿದ್ದ ಪುಸ್ತಕ, ಪೆನ್ನು, 1770/- ರೂಪಾಯಿ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ನ್ಯಾಯಾಲಯದ ಅನುಮತಿ ಮೇರೆಗೆ, ಬಂಟ್ವಾಳ ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 103/202, ಕಲಂ 78 ಕೆ ಪಿ ಆಕ್ಟ್ ಪ್ರಕಾರ ಪ್ರಕರಣ ದಾಖಲಾಗಿದೆ.
0 comments:
Post a Comment