ಬಂಟ್ವಾಳ, ಸೆಪ್ಟೆಂಬರ್ 16, 2023 (ಕರಾವಳಿ ಟೈಮ್ಸ್) : ಹ್ಯಾಂಡ್ ಬ್ರೇಕ್ ಹಾಕದೆ ಲಾರಿ ನಿಲ್ಲಿಸಿದ ಚಾಲಕನ ನಿರ್ಲಕ್ಷ್ಯತನದಿಂದ ಲಾರಿ ಹಠಾತ್ ಮುಂದಕ್ಕೆ ಚಲಿಸಿದ ಪರಿಣಾಮ ರಸ್ತೆ ಬದಿ ನಿಲ್ಲಿಸಿದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿ ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಘಟನೆ ಶುಕ್ರವಾರ ಮಧ್ಯಾಹ್ನದ ವೇಳೆ ಪಾಣೆಮಂಗಳೂರು ಸಮೀಪದ ಮೆಲ್ಕಾರ್ ಜಂಕ್ಷನ್ನಿನಲ್ಲಿ ನಡೆದಿದೆ.
ಘಟನೆಯಿಂದ ಹಾಜ್ರ ಶಾಮ ಹಾಗೂ ಖತೀಜುಲ್ ಆಫಿಯಾ ಎಂಬವರು ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಕಂಪೆನಿಗೆ ಸೇರಿದ ಲಾರಿ ಇದಾಗಿದೆ ಎನ್ನಲಾಗಿದ್ದು, ಕಲ್ಲಡ್ಕ ಕಡೆಯಿಂದ ಬಂದ ಲಾರಿಯನ್ನು ಚಾಲಕ ಹ್ಯಾಂಡ್ ಬ್ರೇಕ್ ಹಾಕದೆ ಮೆಲ್ಕಾರ್ ಜಂಕ್ಷನ್ನಿನ ಇಳಿಜಾರು ರಸ್ತೆಯಲ್ಲಿ ನಿಲ್ಲಿಸಿ ಅಂಗಡಿಗೆ ತೆರಳಿದ್ದು, ಈ ಸಂದರ್ಭ ಲಾರಿ ಹಠಾತ್ ಆಗಿ ಮುಂದಕ್ಕೆ ಚಲಿಸಿ ರಸ್ತೆ ಬದಿಯಲ್ಲಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿ ಬಸ್ಸಿಗಾಗಿ ಕಾಯುತ್ತಿದ್ದ ಶಾಮ ಹಾಗೂ ಆಫಿಯಾ ಅವರಿಗೂ ಡಿಕ್ಕಿ ಹೊಡೆದು ಬಳಿಕ ರಸ್ತೆಯ ಪಕ್ಕಕ್ಕೆ ವಾಲಿಕೊಂಡು ನಿಂತಿದೆ.
ಲಾರಿ ಚಾಲಕ ಹ್ಯಾಂಡ್ ಬ್ರೇಕ್ ಹಾಕದೆ ನಿರ್ಲಕ್ಷ್ಯತನದಿಂದ ಇಳಿದು ಹೋಗಿರುವುದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯ ನಿವಾಸಿ ಮಹಮ್ಮದ್ ಇರ್ಷಾದ್ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರ ಪೆÇಲೀಸ್ ಠಾಣೆಯಲ್ಲಿ ಲಾರಿ ಚಾಲಕನ ವಿರುದ್ದ ಅಪರಾಧ ಕ್ರಮಾಂಕ 127/2023 ಕಲಂ 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment