ಬಂಟ್ವಾಳ, ಸೆಪ್ಟೆಂಬರ್ 24, 2023 (ಕರಾವಳಿ ಟೈಮ್ಸ್) : ಕಾಂಕ್ರಿಟ್ ಪೈಪು ಪಂಪು ಮಿಷನ್ ಅಪಾಯಕಾರಿ ರೀತಿಯಲ್ಲಿ ಲಾರಿಗೆ ಕಟ್ಟಿಕೊಂಡು ನಿರ್ಲಕ್ಷ್ಯದ ಚಾಲನೆಯಿಂದಾಗಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಪಾಣೆಮಂಗಳೂರು ನೇತ್ರಾವತಿ ಸೇತುವೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಭಾನುವಾರ ಬೆಳಿಗ್ಗೆ ನೇತ್ರಾವತಿ ಸೇತುವೆಯಲ್ಲಿ ಕಾಂಕ್ರಿಟ್ ಪೈಪು ಪಂಪ್ ಮಿಷನ್ ಅಪಾಯಕರಾರಿ ರೀತಿಯಲ್ಲಿ ಕಟ್ಟಿಕೊಂಡು ಸಂಚರಿಸುತ್ತಿದ್ದ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಬೈಕ್ ಸವಾರ ರಾಜ್ ಕುಮಾರ್ ಎಂಬಾತನಿಗೆ ತಾಗಿ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment