ಬಂಟ್ವಾಳ, ಸೆಪ್ಟೆಂಬರ್ 09, 2023 (ಕರಾವಳಿ ಟೈಮ್ಸ್) : ತಾಲೂಕಿನ ಪುದು ಗ್ರಾಮದ ಕಡೆಗೋಳಿ ಜಂಕ್ಷನ್ನಿನಲ್ಲಿ ನಡೆಯುತ್ತಿದ್ದ ಅಕ್ರಮ ಮಟ್ಕಾ ಜುಗಾರಿ ಅಡ್ಡೆಗೆ ಶುಕ್ರವಾರ ಸಂಜೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿ ಕಳ್ಳಿಗೆ ನಿವಾಸಿ ಮಹೇಶ್ (28) ಎಂಬಾತನನ್ನು ಬಂಧಿಸಿದ್ದಾರೆ.
ಬಂಟ್ವಾಳ ಡಿವೈಎಸ್ಪಿ ಅವರ ನಿರ್ದೇಶನ ಮೇರೆಗೆ ಗ್ರಾಮಾಂತರ ಪೊಲೀಸರು ಈ ದಾಳಿ ಸಂಘಟಿಸಿದ್ದು, ಮಟ್ಕಾ ಜುಗಾರಿ ಆಡಿಸುತ್ತಿದ್ದ ಮಹೇಶನನ್ನು ಪೊಲೀಸರು ದಸ್ತಗಿರಿ ಮಾಡಿದ್ದು, ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ ಇತರರು ಪರಾರಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಮಟ್ಕಾ ಚೀಟಿ, ಬಾಲ್ ಪೆನ್ ಹಾಗೂ 880/- ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 90/2023 ಕಲಂ 78 ಕೆ ಪಿ ಆಕ್ಟ್ ಪ್ರಕಾರ ಪ್ರಕರಣ ದಾಖಲಾಗಿದೆ.
0 comments:
Post a Comment