ಪುತ್ತೂರು, ಸೆಪ್ಟೆಂಬರ್ 24, 2023 (ಕರಾವಳಿ ಟೈಮ್ಸ್) : ತಾಲೂಕಿನ ಕೆಯ್ಯೂರು ಗ್ರಾಮದ ಕೆಯ್ಯೂರು ಶಾಲಾ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಆರು ವರ್ಷದ ಬಾಲಕ ದಾರುಣವಾಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.
ಮೃತ ಬಾಲಕನನ್ನು ಮಹಮ್ಮದ್ ಆದಿಲ್ ಎಂದು ಹೆಸರಿಸಲಾಗಿದೆ. ಬಾಲಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಚಾಲಕ ಫಯಾಜ್ ಎಂಬಾತನ ನಿರ್ಲಕ್ಷ್ಯತನದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಬಾಲಕ ಮಹಮ್ಮದ್ ಆದಿಲ್ ರಸ್ತೆಗೆಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದಾನೆ. ತಕ್ಷಣ ಬಾಲಕನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆಗೆ ಬಾಲಕ ಮೃತಪಟ್ಟಿದ್ದಾನೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment