ಬಂಟ್ವಾಳ, ಸೆಪ್ಟೆಂಬರ್ 13, 2023 (ಕರಾವಳಿ ಟೈಮ್ಸ್) : ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಅವರ ಹುಟ್ಟುಹಬ್ಬದ ಪ್ರಯುಕ್ತ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿಮಾನಿಗಳು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಿಕೊಂಡರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಂಟ್ವಾಳದಲ್ಲಿ ಉಚಿತ ವೈದ್ಯಕೀಯ ಶಿಬಿರ ಹಾಗೂ ಬೃಹತ್ ರಕ್ತದಾನ ಶಿಬಿರ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ಅಲ್ಪಸಂಖ್ಯಾತ ಘಟಕದ ವತಿಯಿಂದ ಬಿ ಸಿ ರೋಡಿನಲ್ಲಿ ರಕ್ತದಾನ ಶಿಬಿರ, ರಮಾನಾಥ ರೈ ಅವರ ಪ್ರಯತ್ನದಿಂದ ವಿಧಾನ ಪರಿಷತ್ ಸದಸ್ಯ ಯು ಬಿ ವೆಂಕಟೇಶ್ ಅವರ ಪ್ರದೇಶಾಭಿವೃದ್ಧಿ ಯೋಜನೆಯಡಿ ಬಂಟ್ವಾಳ-ಬೈಪಾಸಿನಲ್ಲಿ ನಿರ್ಮಾಣಗೊಂಡ ಅಟೋ ರಿಕ್ಷಾ ನಿಲ್ದಾಣವನ್ನು ಇಲ್ಲಿನ ಅಟೋ ಚಾಲಕ-ಮಾಲಕ ಸಂಘದ ವತಿಯಿಂದ ಉದ್ಘಾಟನೆ, ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಪಾಣೆಮಂಗಳೂರು ಬ್ಲಾಕ್ ಮತ್ತು ಬಂಟ್ವಾಳ ಬ್ಲಾಕ್ ಇವುಗಳ ಸಹಯೋಗದೊಂದಿಗೆ ಬಂಟ್ವಾಳ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ, ಸಜಿಪಮೂಡ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ವೈದ್ಯಕೀಯ ಶಿಬಿರ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳುವ ಮೂಲಕ ಬಂಟ್ವಾಳದ ಅಭಿವೃದ್ದಿಯ ರೂವಾರಿ ರಮಾನಾಥ ರೈಗಳ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು.
0 comments:
Post a Comment