ಬಂಟ್ವಾಳ, ಸೆಪ್ಟೆಂಬರ್ 22, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ, ಹಾಜಿ ಉಸ್ಮಾನ್ ಪಾಣೆಮಂಗಳೂರು ಅವರ ಪತ್ನಿ ಶ್ರೀಮತಿ ಝೊಹರಾ (69) ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ತಡ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಪಾಣೆಮಂಗಳೂರು ಸಮೀಪದ ಆಲಡ್ಕ-ಬಂಗ್ಲೆಗುಡ್ಡೆ ನಿವಾಸಿಯಾಗಿರುವ ಇವರು ಅನಾರೋಗ್ಯದ ನಿಮಿತ್ತ ಕಳೆದ ಕೆಲ ಸಮಯಗಳಿಂದ ಮಂಗಳೂರಿನ ಪುತ್ರಿ ಮನೆಯಲ್ಲಿ ವಾಸವಾಗಿದ್ದರು. ಗುರುವಾರ ರಾತ್ರಿ ಸುಮಾರು 11.30 ಗಂಟೆ ಸುಮಾರಿಗೆ ಅನಾರೋಗ್ಯ ಉಲ್ಬಣಗೊಂಡ ಹಿನ್ನಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತದೇಹವನ್ನು ಪಾಣೆಮಂಗಳೂರಿನ ಬಂಗ್ಲೆಗುಡ್ಡೆ ಮನೆಗೆ ತರಲಾಗುತ್ತಿದ್ದು, ಕುಟುಂಬಿಕರ ಹಾಗೂ ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಶುಕ್ರವಾರ ಮಧ್ಯಾಹ್ನದ ವೇಳೆಗೆ ಆಲಡ್ಕ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ದಫನ ಕಾರ್ಯ ನೆರವೇರಿಸಲಾಗುವುದು ಎಂದು ಕುಟುಂಬಿಕರು ತಿಳಿಸಿದ್ದಾರೆ. ಮೃತರು ಪತಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
0 comments:
Post a Comment