ಬಂಟ್ವಾಳ, ಅಕ್ಟೋಬರ್ 07, 2023 (ಕರಾವಳಿ ಟೈಮ್ಸ್) : ತಾಲೂಕಿನ ಕೆಳಗಿನ ವಗ್ಗ ಬಳಿ ಅನ್ನಭಾಗ್ಯ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಮೀರಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಶನಿವಾರ ಮಧ್ಯಾಹ್ನದ ವೇಳೆ ನಡೆದಿದೆ.
ಬಿ ಸಿ ರೋಡು ಕಡೆಯಿಂದ ಬೆಳ್ತಂಗಡಿ ಕಡೆ ತೆರಳುತ್ತಿದ್ದ ಅನ್ನ ಭಾಗ್ಯ ಅಕ್ಕಿ ಸಾಗಾಟದ ವಾಹನ ಇದಾಗಿದ್ದು, ವಾಹನವೊಂದಕ್ಕೆ ಅಪಘಾತ ಉಂಟಾಗುವುದನ್ನು ತಪ್ಪಿಸಲು ಪ್ರಯತ್ನಿಸಿದ ವೇಳೆ ಚಾಲಕ ನಿಯಂತ್ರಣ ಕಳೆದುಕೊಂಡು ಲಾರಿ ಉರುಳಿ ಬಿದ್ದಿದೆ ಎನ್ನಲಾಗುತ್ತಿದೆ. ಆದರೆ ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಲಾರಿ ಚಾಲಕ ಹಾಗೂ ನಿರ್ವಾಹಕ ಯಾವುದೇ ಅಪಾಯವಿಲ್ಲದೆ ಅದೃಷ್ಟವಶಾತ್ ಪಾರಾಗಿದ್ದಾರೆ. ಚಾಲಕ ಹಾಗೂ ನಿರ್ವಾಹಕರ ವಿವರ ತಿಳಿದು ಬಂದಿಲ್ಲ.
0 comments:
Post a Comment