ಬಂಟ್ವಾಳ, ಅಕ್ಟೋಬರ್ 05, 2023 (ಕರಾವಳಿ ಟೈಮ್ಸ್) : ಬಿ ಮೂಡ ಗ್ರಾಮದ ಕಾಮಾಜೆ ಕ್ರಾಸ್ ಬಳಿ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ಸ್ಕೂಟರ್ ಸವಾರರನ್ನು ಶ್ರೀನಿವಾಸ ಉಡುಪ (60) ಎಂದು ಹೆಸರಿಸಲಾಗಿದೆ. ಬುಧವಾರ ಮಧ್ಯಾಹ್ನ ಸ್ಕೂಟರ್ ಸವಾರನು ನಿಲ್ಲಿಸಿದ್ದ ಸ್ಕೂಟರನ್ನು ಯಾವುದೇ ಮುನ್ಸೂಚನೆ ನೀಡದೇ ಚಲಾಯಿಸಿದ್ದು, ಈ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಇನ್ನೋವಾ ಕಾರಿನ ಚಾಲಕ ಸ್ಕೂಟರಿಗೆ ಅಪಘಾತವಾಗುವುದನ್ನು ತಪ್ಪಿಸಲು ಬ್ರೇಕ್ ಹಾಕಿ ಅಪಘಾತವನ್ನು ತಪ್ಪಿಸಲು ಪ್ರಯತ್ನಿಸಿದರೂ ಸಾಧ್ಯವಾಗದೆ ಸ್ಕೂಟರ್ ಸವಾರಗೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ರಸ್ತೆಗೆಸೆಯಲ್ಪಟ್ಟ ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment