ಬೆಳ್ತಂಗಡಿ, ಅಕ್ಟೋಬರ್ 19, 2023 (ಕರಾವಳಿ ಟೈಮ್ಸ್) : ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಬುಧವಾರ (ಅ 18) ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಲಾಯಿಲ ಜಂಕ್ಷನ್ ಬಳಿ ನಡೆದಿದೆ.
ಮೃತ ಬಾಲಕನನ್ನು ಮುಹಮ್ಮದ್ ರಂಝೀನ್ (10) ಎಂದು ಹೆಸರಿಸಲಾಗಿದೆ.
ಈ ಬಗ್ಗೆ ಸ್ಥಳೀಯ ನಿವಾಸಿ ಸುಕುರು ಸಾಹೇಬ ಎಂಬವರು ಬೆಳ್ತಂಗಡಿ ಸಂಚಾರಿ ಠಾಣೆಗೆ ದೂರು ನೀಡಿದ್ದು, ಅ 18 ರಂದು ಬೆಳಿಗ್ಗೆ ಪಾದಚಾರಿ ಬಾಲಕ ಮೊಹಮ್ಮದ್ ರಂಝೀನ್ (10) ಎಂಬಾತ ರಸ್ತೆ ದಾಟುತ್ತಿದ್ದಾಗ ಜಯ ಎಂಬವರು ಚಲಾಯಿಸುತ್ತಿದ್ದ KA 21 A 1047 ನೋಂದಣಿ ಸಂಖ್ಯೆಯ ಪಿಕ್ ಆಫ್ ವಾಹನ ಢಿಕ್ಕಿ ಹೊಡೆದ ಪರಿಣಾಮ, ಆತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಆತನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದು ಕೊಂಡು ಹೋಗುತ್ತಿದ್ದಾಗ, ಗಾಯಾಳು ಬಾಲಕ ಮೃತಪಟ್ಟಿರುತ್ತಾನೆ ಎಂದು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 101/2023 ಕಲಂ 279, 304(A) ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
0 comments:
Post a Comment