ಬಂಟ್ವಾಳ, ಅಕ್ಟೋಬರ್ 31, 2023 (ಕರಾವಳಿ ಟೈಮ್ಸ್) : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಳ್ಳಿಗೆ ಗ್ರಾಮದ ಬೆಂಜನಪದವು ಎಂಬಲ್ಲಿ ಸಂಭವಿಸಿದೆ.
ಗಾಯಗೊಂಡ ಬೈಕ್ ಸವಾರನನ್ನು ರಿತೇಶ್ ಎಂದು ಹೆಸರಿಸಲಾಗಿದೆ. ಸಂಜೀವ ಎಂಬವರು ಚಲಾಯಿಸುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯತನದಿಂದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸಮೇತ ಸವಾರ ರಸ್ತೆ ಬಿದ್ದು ಗಂಭೀರ ಗಾಯಗೊಂಡವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment