ಬಿಜೆಪಿಗರೇ ನೀವು ಯಾತ್ರೆ ಹೊರಡಬೇಕಾಗಿರುವುದು ರಾಜ್ಯದಲ್ಲಿ ಅಲ್ಲ, ನಿಮ್ಮ 25 ಸಂಸದರನ್ನು ಕಟ್ಟಿಕೊಂಡು ದೆಹಲಿಗೆ ತೆರಳಿ ಪ್ರಧಾನಿ ಮೋದಿ ಕಾಲಿಗೆ ಬಿದ್ದಾದರೂ ಬರಪರಿಹಾಕ್ಕೆ ಒತ್ತಾಯಿಸಿ : ಬಿಜೆಪಿಗರ ಬರ ನಾಟಕದ ವಿರುದ್ದ ಸಿಎಂ ಸಿದ್ದರಾಮಯ್ಯ ತರಾಟೆ - Karavali Times ಬಿಜೆಪಿಗರೇ ನೀವು ಯಾತ್ರೆ ಹೊರಡಬೇಕಾಗಿರುವುದು ರಾಜ್ಯದಲ್ಲಿ ಅಲ್ಲ, ನಿಮ್ಮ 25 ಸಂಸದರನ್ನು ಕಟ್ಟಿಕೊಂಡು ದೆಹಲಿಗೆ ತೆರಳಿ ಪ್ರಧಾನಿ ಮೋದಿ ಕಾಲಿಗೆ ಬಿದ್ದಾದರೂ ಬರಪರಿಹಾಕ್ಕೆ ಒತ್ತಾಯಿಸಿ : ಬಿಜೆಪಿಗರ ಬರ ನಾಟಕದ ವಿರುದ್ದ ಸಿಎಂ ಸಿದ್ದರಾಮಯ್ಯ ತರಾಟೆ - Karavali Times

728x90

31 October 2023

ಬಿಜೆಪಿಗರೇ ನೀವು ಯಾತ್ರೆ ಹೊರಡಬೇಕಾಗಿರುವುದು ರಾಜ್ಯದಲ್ಲಿ ಅಲ್ಲ, ನಿಮ್ಮ 25 ಸಂಸದರನ್ನು ಕಟ್ಟಿಕೊಂಡು ದೆಹಲಿಗೆ ತೆರಳಿ ಪ್ರಧಾನಿ ಮೋದಿ ಕಾಲಿಗೆ ಬಿದ್ದಾದರೂ ಬರಪರಿಹಾಕ್ಕೆ ಒತ್ತಾಯಿಸಿ : ಬಿಜೆಪಿಗರ ಬರ ನಾಟಕದ ವಿರುದ್ದ ಸಿಎಂ ಸಿದ್ದರಾಮಯ್ಯ ತರಾಟೆ

ಬೆಂಗಳೂರು, ಅಕ್ಟೋಬರ್ 31, 2023 (ಕರಾವಳಿ ಟೈಮ್ಸ್) :  ‘ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಡಿದರಂತೆ” ಎಂಬ ಗಾದೆ ಮಾತಿನಂತಾಗಿದೆ ರಾಜ್ಯ ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ. ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ. ಈ ಬಿಜೆಪಿ ನಾಯಕರು ಬರ ಅಧ್ಯಯನಕ್ಕೆ ರಾಜ್ಯದಲ್ಲಿ ಸುತ್ತಾಡಲು ಹೊರಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕುಹಕವಾಡಿದ್ದಾರೆ. 

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರೇ, ನಿಮ್ಮದೇ ಪಕ್ಷದ ಸರಕಾರ ಕಳುಹಿಸಿರುವ ತಜ್ಞರ ತಂಡವೇ ದೆಹಲಿಯಿಂದ ಬಂದು ಕರ್ನಾಟಕದಲ್ಲಿನ ಬರಪರಿಸ್ಥಿತಿಯನ್ನು ಅಧ್ಯಯನ ಮಾಡಿ ಹೋಗಿದೆ. ಈಗ ನೀವು ಅದೇ ಉದ್ದೇಶದಿಂದ ಇನ್ನೊಂದು ಪ್ರವಾಸಕ್ಕೆ ಹೊರಟಿದ್ದೀರಿ. ಯಾಕೆ, ನಿಮ್ಮದೇ ಸರಕಾರ ಕಳಿಸಿರುವ ಬರ ಅಧ್ಯಯನ ತಂಡದ ಮೇಲೆ ನಿಮಗೆ ನಂಬಿಕೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ. 

ನಮ್ಮ ಸರಕಾರದ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ಆಗಿರುವ ನಷ್ಟ ಅಂದಾಜು 33,770 ಕೋಟಿ ರೂಪಾಯಿ. ಕೇಂದ್ರ ಸರಕಾರದಿಂದ ನಾವು ಕೇಳಿರುವುದು 17,901 ಕೋಟಿ ರೂಪಾಯಿ ಪರಿಹಾರ. ಕೇಂದ್ರ ಸರಕಾರದಿಂದ ಇದುವರೆಗೆ ನಯಾಪೈಸೆ ಪರಿಹಾರದ ಹಣ ಬಂದಿಲ್ಲ. ಬಿಜೆಪಿ ನಾಯಕರೇ, ರಾಜ್ಯದ ರೈತರ ಬಗ್ಗೆ ನಿಮಗೆ ಪ್ರಾಮಾಣಿಕವಾದ ಕಾಳಜಿ ಇದ್ದರೆ ಮೊದಲು ಹೆಚ್ಚು ಪರಿಹಾರಕ್ಕಾಗಿ ಒತ್ತಾಯಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಬಲ್ ಎಂಜಿನ್ ಸರಕಾರ ಬಂದರೆ ರಾಜ್ಯದಲ್ಲಿ ಹಾಲು-ಜೇನಿನ ಹೊಳೆ ಹರಿಯತ್ತದೆ ಎಂದು ಅಮಾಯಕ ಕನ್ನಡಿಗರನ್ನು ನಂಬಿಸಿ ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸಂಸದರನ್ನು ಗೆಲ್ಲಿಸಿಕೊಂಡರಲ್ಲಾ, ಅವರೇನು ಮಾಡುತ್ತಿದ್ದಾರೆ? ಕಡ್ಲೆಕಾಯಿ ತಿನ್ನುತ್ತಿದ್ದಾರಾ? ಅವರೆಂದಾದರೂ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಬಾಯಿ ಬಿಟ್ಟಿದ್ದಾರಾ ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರೇ ನೀವು ಯಾತ್ರೆ ಮಾಡಬೇಕಾಗಿರುವುದು ರಾಜ್ಯದಲ್ಲಿ ಅಲ್ಲ, ನೀವು ಯಾತ್ರೆ ಹೊರಡಬೇಕಾಗಿರುವುದು ದೆಹಲಿಗೆ. ನಿಮ್ಮ ಪಕ್ಷದ 25 ಲೋಕಸಭಾ ಸದಸ್ಯರನ್ನು ಕಟ್ಟಿಕೊಂಡು ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿಯವರ ಕಾಲಿಗಾದರೂ ಬಿದ್ದು ಬರಪರಿಹಾರಕ್ಕೆ ಹೆಚ್ಚು ಹಣ ಕೊಡುವಂತೆ ಕೇಳಿ. ನಿಮಗೆ ಕೇಳುವ ಧೈರ್ಯ ಇಲ್ಲ ಎಂದಾದರೆ ಪ್ರಧಾನಿ ಜೊತೆ ಭೇಟಿಗಾಗಿ ನನಗಾದರೂ ಒಂದು ಅಪಾಯಿಂಟ್ ಮೆಂಟ್ ಕೊಡಿಸಿ ಬಿಡಿ ಎಂದು ಕುಹಕವಾಡಿದ್ದಾರೆ. 

ನೆಲ-ಜಲ-ಭಾಷೆಯ ವಿಚಾರದಲ್ಲಿ ಕರ್ನಾಟಕಕ್ಕೆ, ಕನ್ನಡಕ್ಕೆ ಮತ್ತು ಕನ್ನಡಿಗರಿಗೆ ಸಾಲು ಸಾಲು ಅನ್ಯಾಯ ಮಾಡಿ ಯಾವ ಮುಖ ಹೊತ್ತು ರಾಜ್ಯ ಪ್ರವಾಸ ಹೊರಟಿದ್ದೀರಿ? ಬರಪೀಡಿತ ಜನರಿಗೆ ಬೇಕಾಗಿರುವುದು ನಿಮ್ಮ ಬಾಯಿ ಮಾತಿನ ಸಾಂತ್ವನ ಅಲ್ಲ, ಅವರಿಗೆ ಬೇಕಾಗಿರುವುದು ಪರಿಹಾರ. ಬರಗಾಲದ ನಷ್ಟ-ನೋವನ್ನು ಬಳಸಿಕೊಂಡು ರಾಜಕೀಯ ಬೇಳೆ ಬೇಯಿಸಲು ಹೊರಟಿರುವ ನಿಮ್ಮನ್ನು ಜನ ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ, ಜಾಗ್ರತೆಯಿಂದಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಿಜೆಪಿಗರನ್ನು ತೀವ್ರ ತರಾಟೆಗೆಳೆದಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಿಜೆಪಿಗರೇ ನೀವು ಯಾತ್ರೆ ಹೊರಡಬೇಕಾಗಿರುವುದು ರಾಜ್ಯದಲ್ಲಿ ಅಲ್ಲ, ನಿಮ್ಮ 25 ಸಂಸದರನ್ನು ಕಟ್ಟಿಕೊಂಡು ದೆಹಲಿಗೆ ತೆರಳಿ ಪ್ರಧಾನಿ ಮೋದಿ ಕಾಲಿಗೆ ಬಿದ್ದಾದರೂ ಬರಪರಿಹಾಕ್ಕೆ ಒತ್ತಾಯಿಸಿ : ಬಿಜೆಪಿಗರ ಬರ ನಾಟಕದ ವಿರುದ್ದ ಸಿಎಂ ಸಿದ್ದರಾಮಯ್ಯ ತರಾಟೆ Rating: 5 Reviewed By: karavali Times
Scroll to Top