ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾವಣೆಗೆ ನವೆಂಬರ್ 6ರವರೆಗೆ ಅವಕಾಶ - Karavali Times ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾವಣೆಗೆ ನವೆಂಬರ್ 6ರವರೆಗೆ ಅವಕಾಶ - Karavali Times

728x90

25 October 2023

ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾವಣೆಗೆ ನವೆಂಬರ್ 6ರವರೆಗೆ ಅವಕಾಶ

ಬಂಟ್ವಾಳ, ಅಕ್ಟೋಬರ್ 25, 2023 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತ ಕ್ಷೇತ್ರಗಳ ಮತದಾರರ ಪಟ್ಟಿಗೆ ಅರ್ಹ ಮತದಾರರ ನೋಂದಣಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 6 ಕೊನೆ ದಿನಾಂಕವಾಗಿದೆ. 

ಶಿಕ್ಷಕರ ಕ್ಷೇತ್ರಕ್ಕಾಗಿ ನಿಗದಿತ ಅರ್ಜಿ ಸಮೂನೆ-19 ಹಾಗೂ ಪದವೀಧರರ ಕ್ಷೇತ್ರಕ್ಕಾಗಿ ನಿಗದಿತ ಅರ್ಜಿ ನಮೂನೆ-18 ರಲ್ಲಿ ಅರ್ಹ ಮತದಾರರು ಪೂರಕ ದಾಖಲೆಗಳೊಂದಿಗೆ ಬಿ ಸಿ ರೋಡಿನ ಮಿನಿ ವಿಧಾನಸೌಧದ ಚುನಾವಣೆ ಶಾಖೆಯಲ್ಲಿ ನವೆಂಬರ್ 6 ರೊಳಗೆ ಅರ್ಜಿ ಸಲ್ಲಿಸುವಂತೆ ಹಾಗೂ ಈ ಬಗ್ಗೆ ಹೆಚ್ಚಿನ ವಿವರಗಳಿಗೆ ಚುನಾವಣಾ ಆಯೋಗದ ವೆಬ್ ಸೈಟಿಗೆ ಭೇಟಿ ನೀಡುವಂತೆ ಬಂಟ್ವಾಳ ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾವಣೆಗೆ ನವೆಂಬರ್ 6ರವರೆಗೆ ಅವಕಾಶ Rating: 5 Reviewed By: karavali Times
Scroll to Top