ಬಂಟ್ವಾಳ, ಅಕ್ಟೋಬರ್ 07, 2023 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಆಕಾಶ್ ಶೆಟ್ಟಿ, ಗಣೇಶ್ ಹಾಗೂ ಅರುಣ್ ಪ್ರಸಾದ್ ಎಂದು ಹೆಸರಿಸಲಾಗಿದ್ದು, ರಾಜ ಅಲಿಯಾಸ್ ರಾಜೇಂದ್ರ ಹಾಗೂ ಇತರ ಕೆಲ ಆರೋಪಿಗಳು ಓಡಿ ತಪ್ಪಿಸಿಕೊಂಡಿದ್ದಾರೆ.
ಪುಂಚಮೆ ನಿವಾಸಿ ರಾಜ ಅಲಿಯಾಸ್ ರಾಜೇಂದ್ರ ಎಂಬವರ ಮನೆಯ ಪಕ್ಕದಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಈ ಜುಗಾರಿ ಅಡ್ಡೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಪೊಲೀಸರು ಇಸ್ಪೀಟು ಎಲೆಗಳು ಹಾಗೂ ಪ್ಲಾಸ್ಟಿಕ್ ಟಾರ್ಪಾಲ್, 7,600/- ರೂಪಾಯಿ ನಗದು ಹಣ, 4.60 ಲಕ್ಷ ರೂಪಾಯಿ ಮೌಲ್ಯದ ಕಾರು, 3 ದ್ವಿಚಕ್ರ ವಾಹನಗಳ ಸಹಿತ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇಲೀಸು ಠಾಣೆಯಲ್ಲಿ ಅಪರಾಧ ಕ್ರಮಾಂಕ 99/2023 ಕಲಂ 87 ಕೆ ಪಿ ಆಕ್ಟ್ ನಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
0 comments:
Post a Comment