ಬಂಟ್ವಾಳ, ಅಕ್ಟೋಬರ್ 25, 2023 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ಮಂಚಿ-ಕೊಳ್ನಾಡು ಇದರ ಸಹಯೋಗದೊಂದಿಗೆ ಬಂಟ್ವಾಳ ತಾಲೂಕು ಮಟ್ಟದ ಮಕ್ಕಳ ಸಾಹಿತ್ಯ ಸಂಭ್ರಮ-2023 ಅಕ್ಟೋಬರ್ 28 ಶನಿವಾರ ಹಾಗೂ 29 ಭಾನುವಾರದಂದು ಬೆಳಿಗ್ಗೆ 9.30 ರಿಂದ ಸಂಜೆ 4.15ರವರೆಗೆ ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಮಕ್ಕಳಿಗಾಗಿ ಏರ್ಪಡಿಸಲಾಗಿರುವ ವಿಶೇಷ ಶಿಬಿರ ಇದಾಗಿದ್ದು, ಶಿಬಿರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಕಥೆ ರಚನೆ, ಕವನ ರಚನೆ, ರಂಗ ಕಲೆ, ಚಿತ್ರ ಕಲೆ, ಭಾಷಣ ಕಲೆ, ಚುಟುಕು ರಚನೆ, ಕಾರ್ಯಕ್ರಮ ನಿರ್ವಹಣೆ ಹಾಗೂ ಹಾಸ್ಯ ಸಾಹಿತ್ಯ ವಿಷಯಗಳಲ್ಲಿ ತರಬೇತಿ ನೀಡಲಾಗುವುದು. ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣ ಪತ್ರ ನೀಡಲಾಗುವುದು. ಊಟ ಹಾಗೂ ಉಪಹಾರದ ವ್ಯವಸ್ಥೆಯನ್ನು ಶಿಬಿರದಲ್ಲೇ ಏರ್ಪಡಿಸಲಾಗುವುದು. ಸಾಹಿತ್ಯಾಸಕ್ತ ಎಳೆಯರ ಪ್ರತಿಭೆಯ ವಿಕಸನಕ್ಕಾಗಿ ನಡೆಯಲಿರುವ ಈ ಶಿಬಿರದಲ್ಲಿ ಬಂಟ್ವಾಳ ತಾಲೂಕಿನ ಮಕ್ಕಳು ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷೆ ಶ್ರೀಕಲಾ ಕಾರಂತ್ ಅಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment