ಬಂಟ್ವಾಳ, ಅಕ್ಟೋಬರ್ 29, 2023 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ಮೇರೆಮಜಲು ಗ್ರಾಮದ ಮಯ್ಯಡಿ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಗಾಯಾಳು ದ್ವಿಚಕ್ರ ವಾಹನ ಸವಾರರನ್ನು ಮಂಗಳೂರು ತಾಲೂಕು, ಉಳಾಯಿಬೆಟ್ಟು ಗ್ರಾಮದ ನಿವಾಸಿ ಜಿತೇಶ್ (24) ಎಂದು ಹೆಸರಿಸಲಾಗಿದೆ. ಇವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಚಂದ್ರಹಾಸ ಎಂಬವರು ಚಲಾಯಿಸುತ್ತಿದ್ದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ರಸ್ತೆಗೆ ಬಿದ್ದು ಗಾಯಗೊಂಡ ಜೀತೇಶ್ ಅವರನ್ನು ತುಂಬೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment