ಬಂಟ್ವಾಳ, ಅಕ್ಟೋಬರ್ 29, 2023 (ಕರಾವಳಿ ಟೈಮ್ಸ್) : ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಸಜಿಪಮೂಡ ಗ್ರಾಮದ ಗುರುಮಂದಿರ ಬಳಿ ನಡೆದಿದೆ.
ಗಾಯಾಳುಗಳನ್ನು ದ್ವಿಚಕ್ರ ವಾಹನ ಸವಾರರಾದ ದಿನೇಶ್, ಕಬೀರ್ ಹಾಗೂ ಸಹ ಸವಾರ ಬದ್ರುದ್ದೀನ್ ಎಂದು ಹೆಸರಿಸಲಾಗಿದೆ. ಗಾಯಾಳುಗಳನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment