ಬಂಟ್ವಾಳ, ಅಕ್ಟೋಬರ್ 15, 2023 (ಕರಾವಳಿ ಟೈಮ್ಸ್) : ತಾಲೂಕಿನ ಸಿದ್ದಕಟ್ಟೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಗಾಯಗೊಂಡ ಘಟನೆ ನಡೆದಿದೆ.
ಗಾಯಾಳು ಮಹಿಳೆಯನ್ನು ತಂಗಮ್ಮ ಎಂದು ಹೆಸರಿಸಲಾಗಿದೆ. ತಂಗಮ್ಮ ಅವರು ಸಿದ್ದಕಟ್ಟೆಯಲ್ಲಿ ರಾಜ್ಯ ಹೆದ್ದಾರಿ ದಾಟುತ್ತಿದ್ದ ವೇಳೆ ರಾಜೇಶ್ ಎಂಬವರು ಚಲಾಯಿಸುತ್ತಿದ್ದ ಮೋಟಾರ್ ಸೈಕಲ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಗಾಯಾಳು ತಂಗಮ್ಮ ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment