ಪುತ್ತೂರು, ಅಕ್ಟೋಬರ್ 31, 2023 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ, ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿ, ಹಳೆಯ ಮನೆಯ ಕೊಟ್ಟಿಗೆಯ ಅಟ್ಟದಲ್ಲಿದ್ದ, ಸುಮಾರು 23 ಗೋಣಿ ಸುಲಿಯದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರ್ಯಾಚರಣೆ ನಡೆಸಿದ ಪೊಲೀಸರು ಮಂಗಳವಾರ (ಅ 31) ನಾಲ್ಕು ಮಂದಿ ಅರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳಿಂದ 1,55,925/- ರೂಪಾಯಿ ಮೌಲ್ಯದ ಅಡಿಕೆ ಸಹಿತ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು, ಅಟೋ ರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಬಡಗನ್ನೂರು ನಿವಾಸಿಗಳಾದ ಶ್ರವಣ್ ಕೆ (20), ಜಯಚಂದ್ರ (21), ನಿಡ್ಪಳ್ಳಿ ನಿವಾಸಿಗಳಾದ ಅಶೋಕ (24), ಪುನೀತ್ (20) ಎಂದು ಗುರುತಿಸಲಾಗಿದೆ. ಬಂಧಿತರದಿಂದ ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 4,15,925/- ರೂಪಾಯಿ ಎಂದು ಅಂದಾಜಿಸಲಾಗಿದೆ. ಪುತ್ತೂರು ಗ್ರಾಮಾಂತರ ಠಾಣಾ ಪೆÇಲೀಸ್ ಉಪ ನಿರೀಕ್ಷ ಧನಂಜಯ ಬಿ ಸಿ ಅವರ ನೇತೃತ್ವದ ತನಿಖಾ ತಂಡ ಈ ಕಾರ್ಯಾಚರಣೆ ನಡೆಸಿದೆ.
0 comments:
Post a Comment