ಬಂಟ್ವಾಳ, ಅಕ್ಟೋಬರ್ 12, 2023 (ಕರಾವಳಿ ಟೈಮ್ಸ್) : ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮುಸ್ಸಂಜೆ ವೇಳೆ ನಡೆದಿದೆ.
ಮೃತ ಯುವತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಎಂದು ಹೆಸರಿಸಲಾಗಿದೆ.
ಬಿ ಸಿ ರೋಡಿನ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಂಜೆ ಕೆಲಸ ಬಿಟ್ಟು ಬಸ್ ಮೂಲಕ ಬಂದು ದಾಸಕೋಡಿಯಲ್ಲಿ ಇಳಿದು ಹೆದ್ದಾರಿ ಬದಿಯಲ್ಲಿ ಮನೆ ಕಡೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಯಮರೂಪಿಯಾಗಿ ಬಂದು ಅಪ್ಪಳಿಸಿದ ಕಾರಿನ ಹೊಡೆತಕ್ಕೆ ಯುವತಿ ರಸ್ತೆ ಬದಿಯ ಕಮರಿಗೆ ಎಸೆಯಲ್ಪಟ್ಟಿದ್ದು, ಕಾರು ಕೂಡಾ ಪಲ್ಟಿಯಾಗಿ ಕಮರಿಗೆ ಬಿದ್ದಿದೆ.
ತಕ್ಷಣ ಸ್ಥಳೀಯರು ಯುವತಿಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದರಾದರೂ ಅದಾಗಲೇ ಆಕೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಕಾರನ್ನು ಕೂಡಾ ಬಳಿಕ ಕ್ರೇನ್ ಬಳಸಿ ಮೇಲಕ್ಕೆತ್ತಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
0 comments:
Post a Comment