ಮೌಢ್ಯಗಳ ಸುದ್ದಿ ಮತ್ತು ಚರ್ಚೆ ನಡೆಸಿ, ಊಹಾಪೋಹ ಸುದ್ದಿ ಮಾಡಿ ಮಾಧ್ಯಮಗಳು ಹಾಸ್ಯಾಸ್ಪದವಾಗಬಾರದು : ಪತ್ರಕರ್ತರಿಗೆ ಸಿಎಂ ಸಿದ್ದರಾಮಯ್ಯ ಸಲಹೆ - Karavali Times ಮೌಢ್ಯಗಳ ಸುದ್ದಿ ಮತ್ತು ಚರ್ಚೆ ನಡೆಸಿ, ಊಹಾಪೋಹ ಸುದ್ದಿ ಮಾಡಿ ಮಾಧ್ಯಮಗಳು ಹಾಸ್ಯಾಸ್ಪದವಾಗಬಾರದು : ಪತ್ರಕರ್ತರಿಗೆ ಸಿಎಂ ಸಿದ್ದರಾಮಯ್ಯ ಸಲಹೆ - Karavali Times

728x90

31 October 2023

ಮೌಢ್ಯಗಳ ಸುದ್ದಿ ಮತ್ತು ಚರ್ಚೆ ನಡೆಸಿ, ಊಹಾಪೋಹ ಸುದ್ದಿ ಮಾಡಿ ಮಾಧ್ಯಮಗಳು ಹಾಸ್ಯಾಸ್ಪದವಾಗಬಾರದು : ಪತ್ರಕರ್ತರಿಗೆ ಸಿಎಂ ಸಿದ್ದರಾಮಯ್ಯ ಸಲಹೆ

ಮಂಡ್ಯ, ಅಕ್ಟೋಬರ್ 31, 2023 (ಕರಾವಳಿ ಟೈಮ್ಸ್) : ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್ ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದ್ರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದ್ರು. ಆದರೆ ನಾನು ಅಧಿಕಾರ ಪೂರ್ಣಗೊಳಿಸಿ ಮತ್ತೆ ಎರಡನೇ ಬಾರಿ ಸಿಎಂ ಆದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂಥಾ ಮೌಡ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್ ಗಳು ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಪತ್ರಕರ್ತರಿಗೆ ಕಿವಿಮಾತು ಹೇಳಿದರು. 

ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದರಾಗಬೇಡಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡ್ತಾರೆ. ಇದು ತಪ್ಪು ಎಂದರು. 

ನನ್ನ ಸರಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ. ಸರಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡ್ತಾ ಇದೆಯೋ? ಇಲ್ಲವೋ? ಎನ್ನುವುದನ್ನೂ ಪ್ರಾಮಾಣಿಕಕವಾಗಿ ಜನರಿಗೆ ತಲುಪಿಸಬೇಕು ಎಂದು ಸಿಎಂ ನನ್ನ ಬಗ್ಗೆ ಸುಳ್ಳು ಬರೆದಾಗ, ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರಾ ಎಂದು ಕರೆ ಮಾಡಿ ಕೇಳಿಲ್ಲ, ಸರಕಾರ ಒಳ್ಳೆ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಜಗದ್ಗುರು ನಿರ್ಮಲಾನಂದ ಮಹಾ ಸ್ವಾಮೀಜಿಗಳು ನೇತೃತ್ವ  ವಹಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಚಲಯವರಾಯಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳಿಗೌಡ, ರಮೇಶ್ ಬಂಡಿ ಸಿದ್ದೇಗೌಡ, ನರೇಂದ್ರ ಸ್ವಾಮಿ ಹಾಗೂ ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಮೌಢ್ಯಗಳ ಸುದ್ದಿ ಮತ್ತು ಚರ್ಚೆ ನಡೆಸಿ, ಊಹಾಪೋಹ ಸುದ್ದಿ ಮಾಡಿ ಮಾಧ್ಯಮಗಳು ಹಾಸ್ಯಾಸ್ಪದವಾಗಬಾರದು : ಪತ್ರಕರ್ತರಿಗೆ ಸಿಎಂ ಸಿದ್ದರಾಮಯ್ಯ ಸಲಹೆ Rating: 5 Reviewed By: karavali Times
Scroll to Top