ಬಂಟ್ವಾಳ, ಅಕ್ಟೋಬರ್ 22, 2023 (ಕರಾವಳಿ ಟೈಮ್ಸ್) : ಅಕ್ರಮ ಜಾನುವಾರು ಸಾಗಾಟ ಬೇಧಿಸಿದ ವಿಟ್ಲ ಪೊಲೀಸರು ಮೂವರು ಆರೋಪಿಗಳ ಸಹಿತ ಜಾನುವಾರು ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡ ಘಟನೆ ಶನಿವಾರ ಮಧ್ಯಾಹ್ನ ತಾಲೂಕಿನ ಮಾಣಿಲ ಗ್ರಾಮದ ಮುರುವ ಎಂಬಲ್ಲಿ ನಡೆದಿದೆ.
ಶನಿವಾರ ಮಧ್ಯಾಹ್ನ ಪಿಕಪ್ ವಾಹನದಲ್ಲಿ ಆರೋಪಿಗಳಾದ ಜಾಫರ್ ಸಾದಿಕ್, ಹಕೀಂ ಹಾಗೂ ಅಬ್ದುಲ್ ಜಲಾಲ್ ಎಂಬವರು ಮಾಣಿಲ ಗ್ರಾಮದ ಮುರುವ ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದಾಗ ವಿಟ್ಲ ಪೆÇಲೀಸ್ ಠಾಣಾ ಪೆÇಲೀಸರು ಈ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಒಂದು ಗಂಡು ಕರು, ಕೃತ್ಯಕ್ಕೆ ಬಳಸಿದ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment