ಬಂಟ್ವಾಳ, ಅಕ್ಟೋಬರ್ 16, 2023 (ಕರಾವಳಿ ಟೈಮ್ಸ್) : ತಾಲೂಕಿನ ಮಂಚಿ-ಮುಡಿಪು ರಸ್ತೆಯ ಕಂಡತಟ್ಟು ಗುಡ್ಡದಲ್ಲಿ ಪರವಾನಿಗೆರಹಿತವಾಗಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಸೆನ್ ಅಪರಾದ ವಿಭಾಗದ ಪೊಲೀಸರು ಭಾನುವಾರ ರಾತ್ರಿ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಆರೋಪಿಗಳು ಗಣಿಗಾರಿಕೆ ನಡೆಸುತ್ತಿದ್ದ ಯಂತ್ರವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಯಂತ್ರವನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment