ಬಿ.ಸಿ.ರೋಡಿನಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ
ಬಂಟ್ವಾಳ, ನವೆಂಬರ್ 04, 2023 (ಕರಾವಳಿ ಟೈಮ್ಸ್) : ಕಛೇರಿಗೆ ಬರುವ ಕಡತಗಳನ್ನು ಸಕಾರಣಗಳಿಲ್ಲದೇ ತಿರಸ್ಕರಿಸಬಾರದು. ಸಾರ್ವಜನಿಕರನ್ನು ಪದೇ ಪದೇ ಅಲೆದಾಡುವಂತೆ ಮಾಡಬಾರದು. ಸಾರ್ವಜನಿಕರ ಸೇವೆ ಮಾಡುವ ಅವಕಾಶವನ್ನು ಸದುಪಯೋಗಪಡಿಸಬೇಕು ಎಂದು ಮಂಗಳೂರು ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಅಮಾನುಲ್ಲಾ ಹೇಳಿದರು.
ಶನಿವಾರ ಬಿ ಸಿ ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ತಹಶೀಲ್ದಾರ್ ಎಸ್ ಬಿ ಕೂಡಲಗಿ ಮಾತನಾಡಿ, ಸಿಬ್ಬಂದಿ ಕೊರತೆ ಮತ್ತು ಒತ್ತಡಗಳ ಹೊರತಾಗಿಯೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವುದು ಪ್ರತಿಯೊಬ್ಬ ಸರಕಾರಿ ನೌಕರನ ಜವಾಬ್ದಾರಿಯಾಗಿದೆ ಎಂದರು.
ಖಜಾನಾಧಿಕಾರಿ ಮಹೇಶ್, ಉಪನೊಂದಾವಣಾಧಿಕಾರಿ ಶ್ರೀಮತಿ ಕವಿತಾ, ಭೂಮಾಪನ ಇಲಾಖೆಯ ಪರ್ಯಾವೇಕ್ಷಕ ಮರುಲಪ್ಪ, ಉಪತಹಸೀಲ್ದಾರ್ ದಿವಾಕರ ಮುಗುಳಿಯ, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಂದಾಯ ನಿರೀಕ್ಷಕ ಜನಾರ್ದನ ಜೆ ಸ್ವಾಗತಿಸಿ, ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ನರೇಂದ್ರನಾಥ್ ಮಿತ್ತೂರು ವಂದಿಸಿದರು. ಉಪತಹಶೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment