ಬಂಟ್ವಾಳ, ನವೆಂಬರ್ 18, 2023 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ವತಿಯಿಂದ ನವೆಂಬರ್ 19 ರಂದು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ತುಡರ್ ಪರ್ಬದ ಐಸಿರ-2023 ಗೂಡುದೀಪ ಸ್ಪರ್ಧೆ ಮತ್ತು ಅವಲಕ್ಕಿ ತಯಾರಿ ಸ್ಪರ್ಧೆ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತ ಶೇಖರ್ ಬಿ, ಬಂಟ್ವಾಳ ತಾಲೂಕು ಕುಲಾಲ ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ನಾವೂರು ಮತ್ತು ಎಸ್‍ಸಿಡಿಸಿಸಿ ಬ್ಯಾಂಕಿನ ಬಂಟ್ವಾಳ ಶಾಖೆಯ ಪ್ರಬಂಧಕರಾದ ಗಾಯತ್ರಿ ಭಾಗವಹಿಸುವರು. ಇದೇ ವೇಳೆ ದೀಪಾವಳಿ ಸಂದರ್ಭ ನಡೆದ ಪೊಟೋ ಸ್ಪರ್ಧೆಯ ಬಹುಮಾನ ವಿತರಣೆ ಮತ್ತು ಸಾಮೂಹಿಕ ದೀಪಾವಳಿ ಆಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಕುಲಾಲ ಸೇವಾದಳದ ಕಾರ್ಯದರ್ಶಿ ಜಯಂತ ಅಗ್ರಬೈಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment