ಬಂಟ್ವಾಳ, ನವೆಂಬರ್ 16, 2023 (ಕರಾವಳಿ ಟೈಮ್ಸ್) : ಸಜಿಪಮುನ್ನೂರು ಗ್ರಾಮದ ಮಂಜಲ್ಪಾದೆ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಜುಗಾರಿ ಆಟದ ಸ್ಥಳಕ್ಕೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಕೃತ್ಯಕ್ಕೆ ಬಳಸಿದ ಸೊತ್ತುಗಳ ಸಹಿತ 5 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಸ್ಥಳೀಯ ನಿವಾಸಿಗಳಾದ ಪ್ರವೀಣ ಬೆಳ್ಚಡ (40), ರಂಜಿತ್ (26), ನವೀನ (31), ಪ್ರವೀಣ್ ಪೂಜಾರಿ (40) ಹಾಗೂ ಹರೀಶ್ (39) ಎಂದು ಹೆಸರಿಸಲಾಗಿದೆ.
ಸಾರ್ವಜನಿಕ ಗುಡ್ಡದಲ್ಲಿ ಯಾವುದೇ ಅನುಮತಿಯಿಲ್ಲದೇ, ಅಕ್ರಮವಾಗಿ ಹಣ ಪಣವಾಗಿಟ್ಟು ಇಸ್ಪೀಟ್ ಜುಗಾರಿ ಆಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪಿಎಸ್ಸೈ ರಾಮಕೃಷ್ಣ ಅವರ ನೇತೃತ್ವದ ಪೊಲೀಸರು ಈ ದಾಳಿ ಸಂಘಟಿಸಿದ್ದಾರೆ.
ಬಂಧಿತರಿಂದ ನಗದು, 2 ದ್ವಿಚಕ್ರ ವಾಹನ ಸಹಿತ ಸುಮಾರು 81,520/- ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment