ಬೆಳ್ತಂಗಡಿ : ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುತ್ತಿದ್ದ ಮೂವರನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು - Karavali Times ಬೆಳ್ತಂಗಡಿ : ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುತ್ತಿದ್ದ ಮೂವರನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು - Karavali Times

728x90

4 November 2023

ಬೆಳ್ತಂಗಡಿ : ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುತ್ತಿದ್ದ ಮೂವರನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

 ಬೆಳ್ತಂಗಡಿ, ನವೆಂಬರ್, 05, 2023 (ಕರಾವಳಿ ಟೈಮ್ಸ್) : ತಾಲೂಕಿನ ನಿಡ್ಲೆ ಗ್ರಾಮದ ಕುದ್ರಾಯ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಶನಿವಾರ ಸಂಜೆ ಮದ್ಯ ಸೇವನೆ ಮಾಡುತ್ತಿದ್ದ ಮೂವರನ್ನು ಧರ್ಮಸ್ಥಳ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಬಂಧಿತ ಆರೋಪಿಗಳನ್ನು ಕಳೆಂಜ ಗ್ರಾಮದ ನಿವಾಸಿಗಳಾದ ಸದಾನಂದ (25), ದಯಾನಂದ (28) ಹಾಗೂ ಅನೀಶ್ ಕುಮಾರ್ (32) ಎಂದು ಗುರುತಿಸಲಾಗಿದೆ. 

ಬಂಧಿತರಿಂದ ಮದ್ಯ ತುಂಬಿದ 2 ಸಾಚೇಟ್ ಪ್ಯಾಕೇಟ್ ಗಳನ್ನು ಹಾಗೂ ಇತರ ಸಾಮಾಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.  ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 87/2023 ಕಲಂ 15(A) 32(3) ಕರ್ನಾಟಕ ಅಬಕಾರಿ ಕಾಯಿದೆಯಂತೆ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಬೆಳ್ತಂಗಡಿ : ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುತ್ತಿದ್ದ ಮೂವರನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು Rating: 5 Reviewed By: lk
Scroll to Top