ಬೆಳ್ತಂಗಡಿ, ನವೆಂಬರ್ 27, 2023 (ಕರಾವಳಿ ಟೈಮ್ಸ್) : ರಸ್ತೆ ಬದಿಯಲ್ಲಿ ಸೈಕಲ್ ಚಲಾಯಿಸಿಕೊಂಡು ಹೋಗುತ್ತಿದ್ದ ಹುಡುಗನಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಅನಿಯ ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಗಾಯಗೊಂಡ ಸೈಕಲ್ ಸವಾರ ಬಾಲಕನನ್ನು ಅಬ್ದುಲ್ ಸಮದ್ ಎಂದು ಹೆಸರಿಸಲಾಗಿದೆ. ಕೆ ಎಚ್ ಅಶ್ರಫ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಗಾಯಾಳು ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment