ಬಂಟ್ವಾಳ, ನವೆಂಬರ್, 25, 2022 (ಕರಾವಳಿ ಟೈಮ್ಸ್) : ತಾಲೂಕಿನ ನಾವೂರು ಗ್ರಾಮದ ಪೊಯ್ಲೋಡಿ ಎಂಬಲ್ಲಿ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಗಾಯಾಳುಗಳನ್ನು ಪಾದಚಾರಿ ವ್ಯಕ್ತಿ ರವಿ ಹಾಗೂ ಬೈಕ್ ಸವಾರ ಪ್ರಥಮ್ ಎಂದು ಹೆಸರಿಸಲಾಗಿದೆ.
ಬೈಕ್ ಸವಾರ ಪ್ರಥಮ್ ಅವರು ನಾವೂರು ಗ್ರಾಮದ ಪೊಯ್ಲೊಡಿ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ರವಿ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಇಬ್ಬರನ್ನು ಸ್ಥಳೀಯರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಪೈಕಿ ರವಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment