ಬಂಟ್ವಾಳ, ನವೆಂಬರ್ 13, 2023 (ಕರಾವಳಿ ಟೈಮ್ಸ್) : ಬಿ.ಸಿ.ರೋಡಿನ ಫ್ಲೈ ಓವರ್ ಕೆಳಗೆ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನವೊಂದು ಕಳವಾಗಿರುವ ಘಟನೆ ಭಾನುವಾರ (ನ 12) ಮಧ್ಯಾಹ್ನ ವೇಳೆ ನಡೆದಿದೆ.
ಕಳವಾಗಿರುವ ದ್ವಿಚಕ್ರ ವಾಹನ ಸಂಗಬೆಟ್ಟು ನಿವಾಸಿ ಮೊಹಮ್ಮದ್ ಝೀಯಾನ್ (26) ಎಂಬವರಿಗೆ ಸೇರಿದ್ದಾಗಿದೆ. ಅವರು ಭಾನುವಾರ ಮಧ್ಯಾಹ್ನ ಬಿ ಸಿ ರೋಡಿನ ಪ್ಲೈಓವರ್ ಕೆಳಗೆ ತಮ್ಮ KA-19-EW-5523 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನವನ್ನು ಪಾರ್ಕ್ ಮಾಡಿ ತೆರಳಿದ್ದು, ನಂತರ ಬಂದು ನೋಡಿದಾಗ ದ್ವಿಚಕ್ರ ವಾಹನ ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾಗಿರುವ ದ್ವಿಚಕ್ರ ವಾಹನದ ಅಂದಾಜು ಮೌಲ್ಯ 50 ಸಾವಿರ ರೂಪಾಯಿಗಳಾಗಿದ್ದು, ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment