ಬೆಳ್ತಂಗಡಿ, ನವೆಂಬರ್ 12, 2023 (ಕರಾವಳಿ ಟೈಮ್ಸ್) : ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂಬ ಕಾರಣಕ್ಕೆ ಗಂಡನೊಂದಿಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ಮಹಿಳೆಯನ್ನು ತಡೆದು ನಿಲ್ಲಿಸಿದ ತಂಡವೊಂದು ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ದರ್ಗಾ ಬಳಿ ಶನಿವಾರ ಸಂಜೆ ವೇಳೆ ನಡೆದಿದೆ.
ಆರೋಪಿಗಳನ್ನು ಗೋಳಿಯಂಗಡಿ ನಿವಾಸಿಗಳಾದ ಆಸೀಫ್, ಹಂಝತ್ ಖರ್ರೆ, ನೌಷಾದ್ ಹಾಗೂ ಲತೀಫ್ ಎಂದು ಹೆಸರಿಸಲಾಗಿದೆ.
ಸಂತ್ರಸ್ಥ ಮಹಿಳೆ ಶನಿವಾರ (ನ 11) ಸಂಜೆ ವೇಳೆ ತನ್ನ ಗಂಡನೊಂದಿಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಕುವೆಟ್ಟು ಗ್ರಾಮದ ಗುರುವಾಯನಕೆರೆ ದರ್ಗಾ ಬಳಿ ತಲುಪಿದಾಗ ಕಾರಿನಲ್ಲಿ ಬಂದ ಆರೋಪಿಗಳು ಸ್ಕೂಟರನ್ನು ತಡೆದು ನಿಲ್ಲಿಸಿ, ಆರೋಪಿಗಳ ವಿರುದ್ದ ಮಹಿಳೆ ಪೆÇಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಾರವಾಗಿ ತಕರಾರು ತೆಗೆದು, ಮಹಿಳೆ ಹಾಗೂ ಅವರ ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಒಡ್ಡಿರುವುದಲ್ಲದೇ, ಹಲ್ಲೆ ನಡೆಸಿರುತ್ತಾರೆ. ಬಳಿಕ ಆರೋಪಿಗಳು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮಹಿಳೆ ನೀಡಿದ ದೂರಿನಂತೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 112/2023 ಕಲಂ 341, 323, 354, 504, 506 ಆರ್/ಡಬ್ಲ್ಯು 34 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
0 comments:
Post a Comment