ಮಾಜಿ ಸಚಿವ, ಬಿಜೆಪಿ ಮುಖಂಡ ಡಿ.ಬಿ. ಚಂದ್ರೇಗೌಡ ನಿಧನ - Karavali Times ಮಾಜಿ ಸಚಿವ, ಬಿಜೆಪಿ ಮುಖಂಡ ಡಿ.ಬಿ. ಚಂದ್ರೇಗೌಡ ನಿಧನ - Karavali Times

728x90

6 November 2023

ಮಾಜಿ ಸಚಿವ, ಬಿಜೆಪಿ ಮುಖಂಡ ಡಿ.ಬಿ. ಚಂದ್ರೇಗೌಡ ನಿಧನ

ಬೆಂಗಳೂರು, ನವೆಂಬರ್ 07, 2023 (ಕರಾವಳಿ ಟೈಮ್ಸ್) : ಬಿಜೆಪಿ ನಾಯಕ, ಮಾಜಿ ಸಚಿವ, ಮಾಜಿ ಸಂಸದ ಡಿ.ಬಿ. ಚಂದ್ರೇಗೌಡ (87) ಅವರು ಸೋಮವಾರ ರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. 

ವಯೋಸಹಜ ಅಸೌಖ್ಯದಿಂದ ಬಳಲುತ್ತಿದ್ದ ಡಿ.ಬಿ. ಚಂದ್ರೇಗೌಡ ಸೋಮವಾರ ಮಧ್ಯರಾತ್ರಿ ವೇಳೆಗೆ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಇಂದು ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಸಾರ್ವಜನಿಕರಿಗೆ ಮೃತರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಾಳೆ (ನವೆಂಬರ್ 8) ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. 

ಮೂರು ಬಾರಿ ಶಾಸಕರಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡ, ರಾಜ್ಯಸಭಾ ಸದಸ್ಯರಾಗಿ, ಕಾನೂನು ಸಚಿವರಾಗಿ, ವಿಧಾನಸಭಾ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸಿದ್ದರು. ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ, ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು. ಬಳಿಕ ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು.

1971 ಮತ್ತು 1977ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಲೋಕಸಭೆಗೆ ಚಂದ್ರೇಗೌಡ ಸ್ಪರ್ಧಿಸಿದ್ದರು. ತುರ್ತುಪರಿಸ್ಥಿತಿಯ ನಂತರ 1977 ರ ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ತಮ್ಮ ಸಂಸತ್ ಸ್ಥಾನವನ್ನು ಕಳೆದುಕೊಂಡಾಗ, ಅವರು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರಾಗಾಂಧಿ ಅವರಿಗೆ ಸ್ಪರ್ಧಿಸಲು ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ಅಲ್ಲಿ ಇಂದಿರಾಗಾಂಧಿ ಗೆದ್ದು ರಾಜಕೀಯ ಜೀವನದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದರು. 

ಬಳಿಕ ಬದಲಾದ ಸನ್ನಿವೇಶದಲ್ಲಿ ಚಂದ್ರೇಗೌಡರು ಜನತಾ ಪರಿವಾರಕ್ಕೆ ಬದಲಾದರು ಮತ್ತು 1983 ರಲ್ಲಿ ಜನತಾದಳದಿಂದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಗೆದ್ದರು. ನಂತರ 1999ರಲ್ಲಿ ಅವರು ಕಾಂಗ್ರೆಸ್ ಟಿಕೆಟ್‍ನೊಂದಿಗೆ ಶೃಂಗೇರಿ ವಿಧಾನಸಭಾ ಕ್ಷೇತ್ರವನ್ನು ಗೆದ್ದರು. 1978ರಲ್ಲಿ ಎಂಎಲ್‍ಸಿಯಾಗಿಯೂ ಸೇವೆ ಸಲ್ಲಿಸಿದ್ದರು. 1983ರಲ್ಲಿ ಕಾಂಗ್ರೆಸ್ ತೊರೆದು ಕರ್ನಾಟಕ ಕ್ರಾಂತಿ ರಂಗಕ್ಕೆ ಸೇರಿದ್ದರು. 2009 ರಲ್ಲಿ ಚಂದ್ರೇಗೌಡರು ಬೆಂಗಳೂರು ಉತ್ತರ ಸಂಸದೀಯ ಕ್ಷೇತ್ರದಿಂದ ಸ್ಪರ್ಧಿಸಿದರು ಮತ್ತು ಭಾರತೀಯ ಜನತಾ ಪಕ್ಷವನ್ನು ಪ್ರತಿನಿಧಿಸಿ ಲೋಕಸಭೆಗೆ ಪ್ರವೇಶಿಸಿದರು. 1986ರಲ್ಲಿ ಜನತಾ ಪಕ್ಷವನ್ನು ಪ್ರತಿನಿಧಿಸಿ ರಾಜ್ಯಸಭಾ ಸದಸ್ಯರಾಗಿದ್ದರು, ಅದು ನಂತರ ಜನತಾ ದಳವಾಯಿತು. 

  • Blogger Comments
  • Facebook Comments

0 comments:

Post a Comment

Item Reviewed: ಮಾಜಿ ಸಚಿವ, ಬಿಜೆಪಿ ಮುಖಂಡ ಡಿ.ಬಿ. ಚಂದ್ರೇಗೌಡ ನಿಧನ Rating: 5 Reviewed By: karavali Times
Scroll to Top